Advertisement
ಆರು ಹಾಸಿಗೆಗಳ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರವು 9 ವರ್ಷಗಳ ಹಿಂದೆಯೇ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿತ್ತು. ಅದರಂತೆ ಕಡಬ ಆಸ್ಪತ್ರೆಗೆ ಪ್ರಸೂತಿ ತಜ್ಞರು, ಶಿಶು ತಜ್ಞರ ಸಹಿತ ನಾಲ್ವರು ವೈದ್ಯಾಧಿಕಾರಿಗಳು, ಓರ್ವ ದಂತ ವೈದ್ಯರು – ಹೀಗೆ ಒಟ್ಟು 34 ಹುದ್ದೆಗಳು ಮಂಜೂರಾಗಿವೆ. ಪ್ರಸ್ತುತ ನೂತನ ಕಟ್ಟಡದಲ್ಲಿ ಮಂಚ, ಹಾಸಿಗೆ ಸಹಿತ ಕೆಲವು ಅಗತ್ಯ ಸಲಕರಣೆಗಳು ಮಾತ್ರ ಸರಬರಾಜಾಗಿವೆ. ಸಮುದಾಯ ಆಸ್ಪತ್ರೆಗೆ ನೇಮಕವಾಗಬೇಕಾದ ತಜ್ಞ ವೈದ್ಯರು ಹಾಗೂ ಅಗತ್ಯ ಸಿಬಂದಿ ನೇಮಕ ಇನ್ನಷ್ಟೇ ಆಗಬೇಕಿದೆ.
ಕಡಬ, ಕೋಡಿಂಬಾಳ, ಬಂಟ್ರ, 102ನೇ ನೆಕ್ಕಿಲಾಡಿ, ಕುಟ್ರಾಪ್ಪಾಡಿ, ಬಲ್ಯ, ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ – ಹೀಗೆ 8 ಗ್ರಾಮಗಳ ವ್ಯಾಪ್ತಿಯನ್ನು ಈ ಆಸ್ಪತ್ರೆ ಹೊಂದಿದೆ. ಆದರೆ ಕುಂತೂರು, ಆಲಂಕಾರು, ಕೊಂಬಾರು, ಸಿರಿಬಾಗಿಲು, ಐತ್ತೂರು, ಕೊಣಾಜೆ, ಕಾಣಿಯೂರು, ಚಾರ್ವಾಕ, ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಪಂಜ, ಏನೆಕಲ್, ಬಳ್ಪ, ಕೇನ್ಯ, ಎಡಮಂಗಲದ ಜನರು ಇದೇ ಆಸ್ಪತ್ರೆಗೆ ಬರುತ್ತಿರುವುದರಿಂದ ವ್ಯಾಪ್ತಿ ದೊಡ್ಡದಾಗಿ ವಿಸ್ತರಿಸಿದೆ. ಸವಲತ್ತು ನೀಡಲು ಕ್ರಮ
ಸಮುದಾಯ ಆಸ್ಪತ್ರೆಗೆ ಸವಲತ್ತುಗಳನ್ನು, ಸಿಬಂದಿ ನೇಮಕ ಹಾಗೂ ಅಗತ್ಯ ಸಲಕರಣೆಗಳನ್ನು ಒದಗಿಸುವುದು ನಮ್ಮ ಮೊದಲ ಗುರಿ. ಸರಕಾರಕ್ಕೆ ಈ ಕುರಿತು ಬೇಡಿಕೆ ಇಡಲಾಗಿದೆ. ಹಂತ ಹಂತವಾಗಿ ಎಲ್ಲ ಬೇಡಿಕೆಗಳು ಈಡೇರಲಿವೆ. ಹೊಸ ತಾಲೂಕುಗಳಾದ ಕಡಬ ಹಾಗೂ ಮೂಡುಬಿದಿರೆಯ ಸರಕಾರಿ ಆಸ್ಪತ್ರೆಗಳನ್ನು 100 ಹಾಸಿಗೆಗಳ ತಾಲೂಕು ಮಟ್ಟದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಕಡಬಕ್ಕೂ ತಾಲೂಕು ಆಸ್ಪತ್ರೆಯ ಮಾನ್ಯತೆ ಸಿಗಲಿದೆ.
– ಡಾ| ರಾಮಕೃಷ್ಣ ರಾವ್
ಜಿಲ್ಲಾ ಆರೋಗ್ಯಾಧಿಕಾರಿ
Related Articles
Advertisement