Advertisement

ಉಪ ಆರೋಗ್ಯ ಘಟಕ ಉದ್ಘಾಟನೆ

07:46 PM Jan 23, 2021 | Team Udayavani |

ದೇವನಹಳ್ಳಿ: ಜಿಲ್ಲಾಡಳಿತ ಭವನದಲ್ಲಿ ಉಪ ಆರೋಗ್ಯ ಕೇಂದ್ರ ತೆರೆಯಲು ಅನೇಕ ದಿನಗಳಿಂದ ಬೇಡಿಕೆ ಇದ್ದು, ಉಪ ಆರೋಗ್ಯ ಘಟಕವಾಗಿರುವುದ ರಿಂದ ಸಾರ್ವಜನಿಕರಿಗೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳಿಗೆ ಅನುಕೂಲ ವಾಗಲಿದೆ ಎಂದು ಜಿಪಂ ಅಧ್ಯಕ್ಷ ವಿ.ಪ್ರಸಾದ್‌ ತಿಳಿಸಿದರು.

Advertisement

ತಾಲೂಕಿನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಪ ಆರೋಗ್ಯ ಘಟಕ ಉದ್ಘಾಟಿಸಿ ಮಾತನಾಡಿ,. ಜಿಪಂ ಸರ್ವ ಸದಸ್ಯರ ಸಭೆಯಲ್ಲಿ ಹಲವಾರು ಸದಸ್ಯರು ಜಿಲ್ಲಾಡಳಿತ ಭವನ ‌ದಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಡ ಹೇರಲಾಗಿತ್ತು. ಆರೋಗ್ಯ ಕೇಂದ್ರದ ಅವಶ್ಯಕತೆ ಹೆಚ್ಚಿತ್ತು. ಸಿಬ್ಬಂದಿಗೆ ಏನಾದರೂ ತೊಂದರೆಯಾದರೆ, ದೇವನ ಹಳ್ಳಿ ಅಥವಾ ದೊಡ್ಡಬಳ್ಳಾಪುರ ಹೋಗ  ಬೇಕಾದ ಅನಿವಾರ್ಯವಿತ್ತು. ಇದೀಗ ಸ್ಥಳದಲ್ಲಿಯೇ ಪರಿಹಾರ ಸಿಗುವಂತಾಗಿದೆ. ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೇರೆಡೆಗೆ ಕರೆದುಕೊಂಡು ಹೋಗಲು ಅನುಕೂಲವಾಗುತ್ತದೆ ಎಂದರು.

ಇದನ್ನೂ ಓದಿ:ಶೀಘ್ರ ಹುರಿಕಾರರಿಗೆ ಗುರುತಿನ ಚೀಟಿ

ಜಿಲ್ಲಾಡಳಿತ ಭವನದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಘಟಕದಲ್ಲಿ ಒಬ್ಬ ವೈದ್ಯ, ಒಬ್ಬ ಶುಶ್ರೂಷಕಿ ಹಾಗೂ ಒಂದು ಡಿ ಗ್ರೂಪ್‌ ನೌಕರರು ಇರಲಿ  ದ್ದಾರೆ. ಆರೋಗ್ಯ ಘಟಕದಲ್ಲಿ ಪ್ರಾಥಮಿಕ ಚಿಕಿತ್ಸೆ ದೊರೆಯಲಿದ್ದು, ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಸಮಸ್ಯೆಗಳ ಹೊರ ರೋಗಿಗಳು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗುವುದು. ಜಿಲ್ಲಾಡಳಿತದ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಒ.ಪಿ.ಡಿ. ತಪಾಸಣೆ ಮಾಡಲಾಗುವುದು ಎಂದರು. ಜಿಪಂ ಉಪ ಕಾರ್ಯದರ್ಶಿ ಕೆ. ಕರಿಯಪ್ಪ, ಯೋಜನಾ ನಿರ್ದೇಶಕಿ ವಿನುತಾ ರಾಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next