Advertisement

ಹುಬ್ಬಳ್ಳಿ ಹೊಸ ನ್ಯಾಯಾಲಯ ಸಂಕೀರ್ಣದ ಉದ್ಘಾಟನೆ ನಾಳೆ

05:29 PM Aug 11, 2018 | |

ಹುಬ್ಬಳ್ಳಿ: ನಗರದ ತಿಮ್ಮ ಸಾಗರದಲ್ಲಿನ ನೂತನ ನ್ಯಾಯಾಲಯ ಸಂಕೀರ್ಣದ ಉದ್ಘಾಟನಾ ಸಮಾರಂಭ ಆ.12ರಂದು ನಡೆಯಲಿದೆ ಎಂದು ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಅಶೋಕ ಬಳಿಗಾರ, ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement

ನ್ಯಾಯಾಲಯ ಸಂಕೀರ್ಣವನ್ನು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದೀಪಕ ಮಿಶ್ರಾ ಆ.12ರಂದು ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮೋಹನ ಶಾಂತನಗೌಡರ, ಎಸ್‌. ಅಬ್ದುಲ್‌ ನಜೀರ್‌, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದಿನೇಶ ಮಾಹೇಶ್ವರಿ, ನ್ಯಾಯಮೂರ್ತಿ ರವಿ ಮಳಿಮಠ, ಧಾರವಾಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಬೂದಿಹಾಳ ಆರ್‌.ಬಿ., ವಿಧಾನ ಪರಿಷತ್ತು ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಜಗದೀಶ ಶೆಟ್ಟರ, ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ, ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ಸಂಸದ ಪ್ರಹ್ಲಾದ ಜೋಶಿ ಸೇರಿದಂತೆ ಒಟ್ಟು 36 ನ್ಯಾಯಮೂರ್ತಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ವಕೀಲರ ಸಂಘ 100 ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ ಏಷ್ಯಾದಲ್ಲಿಯೇ ಮಾದರಿಯಾದ ನೂತನ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ಏಳು ಅಂತಸ್ತುಗಳ ನ್ಯಾಯಾಲಯ ಸಂಕೀರ್ಣದಲ್ಲಿ ಮೊದಲಿನ ಎರಡು ಅಂತಸ್ತು ಪಾರ್ಕಿಂಗ್‌ಗೆ ಮೀಸಲಿಡಲಾಗಿದೆ ಎಂದರು. ಸಂಘದ ಪದಾಧಿಕಾರಿಗಳಾದ ಎಸ್‌.ವಿ. ಕೊಪ್ಪರ, ಜಯರಾಜ ಪಾಟೀಲ, ಸುಮೀತ ಶೆಟ್ಟರ, ದೇವರಾಜ ಗೌಡರ, ವಿಠ್ಠಲ ಸೋಮನಕೊಪ್ಪ, ಕಾಮಧೇನು ಆರ್‌.ಎಚ್‌., ಸವಿತಾ ಹಾನಗಲ್ಲ, ಶೋಭಾ ಹಬೀಬ, ಬಿ.ವಿ. ಕೋರಿಮಠ, ಸದಾನಂದ ದೊಡಮನಿ, ಮಂಜುನಾಥ ಕಟ್ಟಿ ಸುದ್ದಿಗೋಷ್ಠಿಯಲ್ಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next