Advertisement

ಹುಬ್ಬಳ್ಳಿಯಲ್ಲಿ ಇನ್ ವೆಸ್ಟ್ ಕರ್ನಾಟಕ ಸಮಾವೇಶ ಆರಂಭ: ಹಲವು ಉದ್ದಿಮೆದಾರರು ಭಾಗಿ

12:01 PM Feb 14, 2020 | Mithun PG |

ಹುಬ್ಬಳ್ಳಿ: ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಕಲಬುರಗಿ  ವಿಭಾಗಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳ ಸ್ಥಾಪನೆಯ ಬಹುನಿರೀಕ್ಷಿತ ಇನ್ ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ ನಗರದ ಡೆನಿಸನ್ಸ್ ಹೋಟೆಲ್ ಸಭಾಂಗಣದಲ್ಲಿ ಪ್ರಾರಂಭವಾಯಿತು.

Advertisement

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ ಪ್ರಾಸ್ತಾವಿಕವಾಗಿ ಮಾತನಾಡಿ, ಹದಿನೈದು ವರ್ಷಗಳ ಹಿಂದೆ ಧಾರವಾಡದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ತಮಗೆ ಉತ್ತರ ಕರ್ನಾಟಕದ ಭೌಗೋಳಿಕ, ಸಾಮಾಜಿಕ, ಆರ್ಥಿಕ ಪರಿಚಯವಿದೆ. ಈ ಭಾಗದ ಅಭಿವೃದ್ಧಿ ನಮ್ಮೆಲ್ಲರ ಕನಸಾಗಿದೆ. ಇನ್ ವೆಸ್ಟ್ ಕರ್ನಾಟಕ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವುದು ಹೊಸ ಭರವಸೆ ಹುಟ್ಟಿಸಿದೆ ಎಂದರು.

ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಅವರು ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ಹುಬ್ಬಳ್ಳಿ ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಪರಿಚಯ ಮಾಡಿಕೊಟ್ಟರು.

ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ಬೃಹತ್ , ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೇರಿದಂತೆ ಪ್ರಮುಖ ಉದ್ದಿಮೆದಾರರು, ಕಂಪೆನಿಗಳ ಪ್ರತಿನಿಧಿಗಳು  ಪಾಲ್ಗೊಂಡಿದ್ದಾರೆ

ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನಲ್ಲಿ ಇನ್ ವೆಸ್ಟ್ ಕರ್ನಾಟಕ ಸಮಾವೇಶ

Advertisement

ಬರುವ ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನಲ್ಲಿ ಇನ್ ವೆಸ್ಟ್‌ ಕರ್ನಾಟಕ ಸಮಾವೇಶ ನಡೆಯಲಿದೆ ಎಂಬ ಮಾಹಿತಿಯನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ಎಲ್ ಸಿ ಡಿ ಪರದೆಯ ಮೂಲಕ ಅಧಿಕೃತವಾಗಿ ಅನಾವರಣಗೊಳಿಸಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಕೈಗಾರಿಕೆ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next