Advertisement

ಜಿಲ್ಲಾಮಟ್ಟದ ಮೂರು ದಿನಗಳ ಫ‌ಲಪುಷ್ಪ ಪ್ರದರ್ಶನ ಉದ್ಘಾಟನೆ

10:16 PM Feb 29, 2020 | Sriram |

ಉಡುಪಿ: ಉಡುಪಿಯ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಶನಿವಾರದಿಂದ 3 ದಿನ ಕಾಲ ಆರಂಭವಾಗಿರುವ ಜಿಲ್ಲಾಮಟ್ಟದ ಫ‌ಲಪುಷ್ಪ ಪ್ರರ್ದಶನವನ್ನು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು.

Advertisement

ಉಡುಪಿಯು ತೋಟಗಾರಿಕಾ ಜಿಲ್ಲೆ ಎನ್ನುವ ಖ್ಯಾತಿಗೆ ಭಾಜನವಾಗಲಿ ಎಂದು ದಿನಕರ ಬಾಬು ಅವರು ಹಾರೈಸಿದರು.

ಜಿ. ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್‌ ಶೆಟ್ಟಿ ಶುಭ ಕೋರಿದರು. ಕೃಷಿಯ ಬಗ್ಗೆ ಮಾಹಿತಿ ನೀಡುವ ಮೂರು ಕಿರು ಹೊತ್ತಗೆಗಳನ್ನು ಬಿಡುಗಡೆಗೊಳಿಸಲಾಯಿತು. ಜಿ.ಪಂ. ಸಿಇಒ ಪ್ರೀತಿ ಗೆಹೊÉàಟ್‌, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್‌ ಹೆಗ್ಡೆ ಮಾರಾಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಚಂದ್ರಶೇರ್ಖ ನಾಯಕ್‌, ಬ್ರಹ್ಮಾವರ ಕೃಷಿ ಕಾಲೇಜಿನ ಪ್ರಾಂಶುಪಾಲ ಡಾ| ಸುಧೀರ್‌ ಕಾಮತ್‌, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕಕುಮಾರ್‌ ಕೊಡ್ಗಿ ಮತ್ತಿತರರು ಉಪಸ್ಥಿತರಿದ್ದರು.

ತೋಟಗಾರಿಕಾ ಇಲಾಖೆ ಉಪನಿರ್ದೇ ಶಕಿ ಭುವನೇಶ್ವರಿ ಸ್ವಾಗತಿಸಿದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ನಿಧೀಶ್‌ ಕೆ.ಜೆ. ವಂದಿಸಿದರು.

ಬಗೆಬಗೆಯ ಪುಷ್ಪ ಚಿತ್ರಾವಳಿಗಳು
ಪ್ರದರ್ಶನದಲ್ಲಿ ಕಲ್ಲಂಗಡಿ ಹಣ್ಣುಗಳಲ್ಲಿ ರಚಿಸಿರುವ ಪೇಜಾವರ ಮಠದ ಶ್ರೀವಿಶ್ವೇಶತೀರ್ಥರ ಚಿತ್ರ ಸೇರಿದಂತೆ, ಲಾಲ್‌ ಬಹದ್ದೂರ್‌ ಶಾಸಿŒ, ವಿವೇಕಾನಂದ, ಸುಭಾಷ್‌ಚಂದ್ರ ಬೋಸ್‌, ಭಗತ್‌ ಸಿಂಗ್‌, ಸರ್‌ ಎಂ. ವಿಶ್ವೇಶ್ವರಯ್ಯ, ಅಟಲ್‌ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ ಆಕೃತಿಗಳು ನೋಡುಗರ ಗಮನ ಸೆಳೆಯುತ್ತಿವೆ.

Advertisement

ಗುಲಾಬಿ, ಸೇವಂತಿಗೆ, ಚೆಂಡು ಹೂ, ಗ್ಲಾಡಿಯೋಲಸ್‌, ಕಾರ್ನೇಶನ್‌ ಹೂಗಳಿಂದ ರಚಿತವಾದ 24 ಅಡಿ ಉದ್ದದ ಹಡಗಿನ ಕಲಾಕೃತಿ ರಚಿಸಿದ್ದು, ಇದಕ್ಕಾಗಿ 30000 ಹೂ ಗಳನ್ನು ಬಳಸಲಾಗಿದೆ. ವಿವಿಧ ಬಗೆಯ ಹೂ ಗಳಿಂದ ರಚಿಸಿರುವ ಅಕ್ಟೋಪಸ್‌, ಜೋಡಿ ಮೀನುಗಳ ಕಲಾಕೃತಿ, ಸಮುದ್ರ ಕುದುರೆ, ಸಮುದ್ರದ ಚಿಪ್ಪಿನಲ್ಲಿ ಮುತ್ತು, ಸ್ಟಾರ್‌ ಫಿಶ್‌ ಆಕೃತಿಗಳ‌ ಮುಂದೆ ಸಾರ್ವಜನಿಕರು ಮತ್ತು ಮಕ್ಕಳು ಪೋಟೋ ತೆಗೆದುಕೊಳ್ಳುವ ದೃಶ್ಯ ಸಾಮಾನ್ಯವಾಗಿದೆ.

ವಸ್ತುಪ್ರದರ್ಶನ
ಫ‌ಲಪುಷ್ಪ ಪ್ರದರ್ಶನ ಆವರಣದ ಹಿಂಭಾಗದಲ್ಲಿ ಕೃಷಿ ಸಂಬಂಧಿತ ಇಲಾಖೆಗಳ ವಿವಿಧ ಯೋಜನೆಗಳ ಕುರಿತು ವಸ್ತುಪ್ರದರ್ಶನ, ನರ್ಸರಿ ಗಿಡಗಳ ಮಾರಾಟ ಮತ್ತು ಪ್ರದರ್ಶನ, ವಿವಿಧ ಬೀಜಗಳ ಮಾರಾಟ ಮಳಿಗೆಗಳಿದ್ದು, ಕೃಷಿ ಮತ್ತು ತೋಟಗಾರಿಕಾ ಆಸಕ್ತರಿಗೆ ಸಮಗ್ರ ಮಾಹಿತಿ ದೊರೆಯಲಿದೆ. ಫ‌ಲಪುಷ್ಪ ಪ್ರದರ್ಶನದ ಪ್ರಯುಕ್ತ ರವಿವಾರ ಬೆಳಗ್ಗೆ 10 ಗಂಟೆಗೆ ಸಾರ್ವಜನಿಕರಿಗೆ ಪುಷ್ಪ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ತೋಟಗಾರಿಕಾ ಬೆಳೆಗಳಲ್ಲಿ ಲಾಭದಾಯಕ ಮಿಶ್ರ ಬೇಸಾಯ ಕುರಿತಂತೆ ಮಾ. 2ರಂದು ವಿಚಾರ ಸಂಕಿರಣ ಆಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next