Advertisement

ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ; ಮುಖ್ಯಮಂತ್ರಿ ಬೊಮ್ಮಾಯಿ

02:44 PM Nov 27, 2022 | Team Udayavani |

ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಹಿಂದೆ ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣುವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು.

ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ  ಕಾರ್ಯಕ್ರಮವನ್ನು ವೈಭವಾಯುತವಾಗಿ  ಆಯೋಜಿಸಲಾಗುವುದು ಎಂದರು.

ಚುಕ್ಕಿ ರೋಗ ತಡೆಗೆ ಕ್ರಮ

Advertisement

ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆಯಾಗುತ್ತಿದೆ ಎಂದರು.

ಶೃಂಗೇರಿಯಲ್ಲಿ ಆಸ್ಪತ್ರೆ

ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದೆ. ಸ್ಥಳದ ಸಮಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next