Advertisement

ಕೋವಿಡ್ ವಾರಿಯರ್ಸ್‌ಗೆ ಪ್ರೋತ್ಸಾಹಧನ ವಿತರಣೆ

10:01 AM Jun 29, 2020 | Suhan S |

ಶೃಂಗೇರಿ: ಕೋವಿಡ್‌-19 ತಡೆಗಟ್ಟುವ ನಿಟ್ಟಿನಲ್ಲಿ ಕ್ಷಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ನಡೆಯಿತು.

Advertisement

ಡಿಸಿಸಿ ಬ್ಯಾಂಕ್‌ ಹಾಗೂ ವಿವಿಧ ಸಹಕಾರ ಸಂಘಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಟಿ.ಡಿ ರಾಜೇಗೌಡ, ರಾಜ್ಯದಲ್ಲಿ ಕೋವಿಡ್‌ ದಾಳಿ ಇನ್ನಷ್ಟು ಉಲ್ಬಣಗೊಳ್ಳುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರೊಂದಿಗೆ ಸಾರ್ವಜನಿಕರೂ ಕೈಜೊಡಿಸಿ, ಅದರ ನಿರ್ಮೂಲನೆಗೆ ಪಣ ತೊಡಬೇಕು. ಜಿಲ್ಲೆಯಲ್ಲಿ 23 ಪ್ರಕರಣಗಳು ಕಾಣಿಸಿಕೊಂಡಿದ್ದು, ಇದರಲ್ಲಿ ಬಹುತೇಕ ರೋಗಿಗಳು ಗುಣಮುಖರಾಗಿದ್ದಾರೆ. ಕ್ಷೇತ್ರದಲ್ಲಿ 4ಲಕ್ಷ ರೂ ವೆಚ್ಚದಷ್ಟು ಸ್ಯಾನಿಟೈಜರ್‌,ಮಾಸ್ಕ್, ಪಿಪಿಇ ಕಿಟ್‌ ಹಾಗೂ ಆಹಾರ ಕಿಟ್‌ಗಳನ್ನು ಬೀದಿ ಬದಿ ವ್ಯಾಪಾರಿಗಳು, ಆಟೋ ಚಾಲಕರು ಹಾಗೂ ಕೂಲಿ ಕಾರ್ಮಿಕರಿಗೆ ವಿತರಿಸಲಾಗಿದೆ. ಈಗಾಗಲೇ 2500 ಮಾಸ್ಕ್ಗಳ ದಾಸ್ತಾನು ಮಾಡಿದ್ದು ಅಗತ್ಯತೆ ಇದ್ದಲ್ಲಿ ಅದನ್ನು ಪೂರೈಸಲಾಗುತ್ತದೆ ಎಂದರು.

ಸರ್ಕಾರ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯನ್ನು ಮುಂದೂಡಬೇಕಿತ್ತು. ಹಿಂದಿನ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪಾಸ್‌ ಮಾಡಬೇಕಿತ್ತು. ಕ್ಷೇತ್ರದಲ್ಲಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗೆ ಶೇ. 100 ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇತ್ತು. ಉತ್ಸಾಹದಿಂದಲೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಅವರ ಸುರಕ್ಷತೆಗಾಗಿ ಈಗಾಗಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾ ಸಹಕಾರ ಸಂಘದ ಅಧಿಕಾರಿ ವಸಂತಿ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎಚ್‌.ಕೆ. ದಿನೇಶ್‌ ಹೆಗ್ಡೆ, ಶಾರದಾ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನರೇಂದ್ರ ಹೆಗ್ಡೆ, ಚೇತನ್‌ ಹೆಗ್ಡೆ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next