Advertisement

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

01:29 AM Nov 08, 2024 | Team Udayavani |

ಬೆಂಗಳೂರು: ಐಐಟಿ, ಐಐಎಂ, ಐಐಎಸ್‌ಸಿ, ಎನ್‌ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಹಿಂದುಳಿದ ಜಾತಿ / ವರ್ಗದ (ಎಸ್‌ಸಿ/ ಎಸ್‌ಟಿ) ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1ರಿಂದ 2 ಲಕ್ಷ ರೂ.ಗೆ ಹೆಚ್ಚಳ ಮಾಡಿ ಸರಕಾರ ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಅನುಕೂಲವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ತಿಳಿಸಿದ್ದಾರೆ.

Advertisement

ಪಿಯುಸಿಯಲ್ಲಿ ಶೇ. 95ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್‌ ಪ್ರವೇಶ ಪರೀಕ್ಷೆಯ ಮೂಲಕ ಸರಕಾರಿ ಕೋಟಾದಡಿ ಪ್ರವೇಶ ದೊರಕದೆ ಮ್ಯಾನೇಜ್‌ಮೆಂಟ್‌ ಕೋಟಾದಡಿ ಎಂಬಿಬಿಎಸ್‌ ಕೋರ್ಸ್‌ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ.ಗಳ ಶುಲ್ಕ ಧನವನ್ನು ಒದಗಿಸಲು ಸರಕಾರ ತೀರ್ಮಾನಿಸಿದೆ. ಎಂಬಿಬಿಎಸ್‌ ಪದವಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇ. 60ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು.

ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್‌ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರಕಾರಿ ಕೋಟಾದಡಿ ಸೀಟು ಸಿಗದೇ ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿದ್ದರೆ ಅಂತಹವರ ಶುಲ್ಕವನ್ನು ಸರಕಾರ ಭರಿಸಲಿದೆ. ಅದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂ. ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಸಚಿವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next