Advertisement
ಹಾಲು ಒಕ್ಕೂಟ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಹೈನುಗಾರರಿಗೆ ಲೀಟರ್‌ಗೆ ಕನಿಷ್ಠ 35 ರೂ. ಹಾಗೂ ರಾಜ್ಯ ಸರಕಾರದ ಸಬ್ಸಿಡಿ ಮೊತ್ತ 5 ರೂ. ಸೇರಿ ಒಟ್ಟು 40 ರೂ. ನೀಡಲಾಗುತ್ತಿದೆ ಎಂದರು.ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ದಿನಕ್ಕೆ ಸರಾಸರಿ 3,91,367 ಲೀ. ಹಾಲು ಉತ್ಪಾದನೆಯಾಗುತ್ತಿದ್ದು ಕೊರತೆ ಸರಿದೂಗಿಸಲು ಹೊರ ಜಿಲ್ಲೆಗಳಿಂದ 1 ಲಕ್ಷ ಲೀಟರ್ ಹಾಲು ಖರೀದಿಸಲಾಗುತ್ತಿದೆ. ಇತರ ಜಿಲ್ಲೆಗೆ ಹೋಲಿಸಿ ದರೆ ನಮ್ಮಲ್ಲಿ ಉತ್ಪಾದನ ವೆಚ್ಚವೂ ಅಧಿಕ. ಅದಕ್ಕಾಗಿ ಮತ್ತೆ 5 ರೂ. ಮೊತ್ತವನ್ನು ಹೆಚ್ಚುವರಿಯಾಗಿ ಹೈನುಗಾರರಿಗೆ ನೀಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಳ ನಿರೀಕ್ಷಿಸಬಹುದು ಎಂದರು.
ನಂದಿನಿ ಪಶು ಆಹಾರ ಚೀಲಕ್ಕೆ 1,350 ರೂ. ದರವಿದ್ದು, ಆಗಸ್ಟ್ 1ರಿಂದ ಹೈನುಗಾರರಿಗೆ ಪ್ರತಿ ಚೀಲಕ್ಕೆ 25 ರೂ. ಸಬ್ಸಿಡಿ ನೀಡಲಿದೆ. ಇದರಿಂದಾಗಿ ಒಕ್ಕೂಟಕ್ಕೆ 30 ಲಕ್ಷ ರೂ. ಹೊರೆಯಾಗಲಿದೆ. ಇದಲ್ಲದೆ ಪಶು ಸಾಕಣೆ, ಮೇವು ಮುಂತಾದವುಗಳಿಗೆ ಸಬ್ಸಿಡಿ ಯೋಜನೆ, ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಶೂನ್ಯಬಡ್ಡಿ ಸಾಲ ಒದಗಿಸಲಾಗುತ್ತಿದೆ ಎಂದರು. ಪುತ್ತೂರಿನ ಕೊಟೆಚಾ ಹಾಲ್ ಬಳಿ 15 ಎಕ್ರೆ ಜಾಗ ವನ್ನು ಒಕ್ಕೂಟದ ಚಟುವಟಿಕೆಗೆ ಕಾದಿರಿಸಲಾಗು ತ್ತಿದೆ. ಇದರಲ್ಲಿ ಹಾಲಿನ ಮಿನಿ ಡೇರಿ, ಗೋದಾಮು ನಿರ್ಮಾಣ, ಹಸುರು ಹುಲ್ಲು ಬೆಳೆಸಲು ಅವಕಾಶ ಇದೆ. ಕೊಯ್ಲ ಪಶು ಸಂಗೋಪನೆ ಕ್ಷೇತ್ರದಲ್ಲಿ 20 ಎಕ್ರೆಯನ್ನು ಹಾಲು ಒಕ್ಕೂಟಕ್ಕೆ ಹಸುರು ಹುಲ್ಲು ಬೆಳೆಸಲು ನೀಡುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದರು.
Related Articles
Advertisement
ಗೋವರ್ಧನ ಯೋಜನೆ: ಕೇಂದ್ರ ಸರಕಾರದ ಗೋವರ್ಧನ ಯೋಜನೆಯಡಿ 200 ದನಗಳನ್ನು ಸಾಕಲು 4 ಕೋ. ರೂ. ಬೇಕಾಗಿದ್ದು, ಶೇ.50ನ್ನು ಸರಕಾರ, ಶೇ.50ನ್ನು ಹೈನುಗಾರರೇ ಭರಿಸಬೇಕು. ಇದು ದೊಡ್ಡ ಯೋಜನೆಯಾಗಿರುವುದರಿಂದ ನಿಯಮ ಸಡಿ ಲಿಸಿ 1 ಕೋ. ರೂ.ಗೆ ಇಳಿಸಿದರೆ 50 ಲಕ್ಷ ರೂ. ಮೊತ್ತ ಪಾವತಿಸಲು ಹೈನುಗಾರರು ಸಿದ್ಧರಿದ್ದಾರೆ ಎಂದರು.
ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ನಾರಾಯಣ ಪ್ರಕಾಶ್, ಪದ್ಮನಾಭ ಶೆಟ್ಟಿ, ಸುಧಾಕರ ರೈ, ಬೋಳ ಸದಾಶಿವ ಶೆಟ್ಟಿ, ನರಸಿಂಹ ಕಾಮತ್, ಕಮಲಾಕ್ಷ ಹೆಬ್ಟಾರ್, ಸವಿತಾ ಎನ್.ಶೆಟ್ಟಿ, ಸ್ಮಿತಾ ಆರ್.ಶೆಟ್ಟಿ, ಸುಭದ್ರಾ ರಾವ್, ವ್ಯವಸ್ಥಾಪಕ ನಿರ್ದೇಶಕ ವಿವೇಕ್, ಮಾರುಕಟ್ಟೆ ಮುಖ್ಯಸ್ಥ ರವಿರಾಜ್ ಉಡುಪ ಉಪಸ್ಥಿತರಿದ್ದರು.
8.29 ಕೋ.ರೂ. ಲಾಭದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಕಳೆದ ಸಾಲಿನಲ್ಲಿ 1,108.089 ಕೋಟಿ ರೂ. ವಹಿವಾಟು ನಡೆಸಿದ್ದು, 8.29 ಕೋ. ರೂ ನಿವ್ವಳ ಲಾಭ ಗಳಿಸಿದೆ. ಸೈಲೇಜ್‌ಗೆ ಉತ್ತೇಜನ
ಮೆಕ್ಕೆ ಜೋಳವನ್ನು ಸಂಸ್ಕರಿಸಿ ಮೇವಿನ ಹುಲ್ಲು ಸೆ„ಲೇಜ್(ರಸ ಮೇವು)ಆಗಿ ಪರಿವರ್ತಿಸಲು ಹೈನು ಗಾರರಿಗೆ ಉತ್ತೇಜನ ನೀಡಲಾಗುತ್ತಿದೆ. ಕರಾವಳಿಯಲ್ಲಿ ಅಡಿಕೆ ತೋಟಗಳಲ್ಲೂ ಹಸುರು ಹುಲ್ಲು ಬೆಳೆಸಲು ಎಕ್ರೆಗೆ 10 ಸಾ. ರೂ. ಸಬ್ಸಿಡಿ ನೀಡಲಾಗುತ್ತದೆ. 40 ಸಾವಿರ ರಾಸುಗಳಿಗೆ 3.7 ಕೋಟಿ ರೂ.ಗಳ ವಿಮೆ ಮೊತ್ತ ಭರಿಸಲಾಗುತ್ತಿದೆ ಎಂದು ಸುಚರಿತ ಶೆಟ್ಟಿ ಹೇಳಿದರು.