Advertisement
ಡಿ.ಕೆ.ಶಿವಕುಮಾರ್ ಬಂಧನವಾದಾಗ ಕುಮಾರ ಸ್ವಾಮಿ ಮಲೇಶಿಯಾದಲ್ಲಿದ್ದರು. ಆಗಲಾದರೂ ದೆಹಲಿಗೆ ಬಂದು ಡಿ.ಕೆ.ಶಿವಕುಮಾರ್ ಜತೆ ಮಾತ ನಾಡಬಹುದಿತ್ತು. ಮಾನಸಿಕ ಧೈರ್ಯ ತುಂಬ ಬಹುದಾಗಿತ್ತು. ಅದಾದ ಬಳಿಕ ಬೆಂಗಳೂರಿಗೆ ಬಂದರು. ಇಲ್ಲಿಯೂ ಒಕ್ಕಲಿಗ ಮುಖಂಡರು ಪ್ರತಿ ಭಟನೆ ನಡೆಸಿದರು. ಅದಕ್ಕೂ ಬೆಂಬಲ ನೀಡಲಿಲ್ಲ. ಕನಿಷ್ಠ ಪಕ್ಷ ಮಾಧ್ಯಮಗಳ ಮೂಲಕವೂ ಹೋರಾಟಕ್ಕೆ ಬೆಂಬಲವಿದೆ. ಕಾನೂನುಬಾಹಿರವಾಗಿ ಬಂಧನದಲ್ಲಿಟ್ಟು ಕಿರುಕುಳ ನೀಡುವುದು ಸರಿಯಲ್ಲ ಎಂದು ಸೌಜನ್ಯಕ್ಕೂ ಒಂದು ಮಾತು ಹೇಳಲಿಲ್ಲ ಎಂದು ಚಲುವರಾಯಸ್ವಾಮಿ ಛೇಡಿಸಿದರು.
Related Articles
Advertisement
ದರೋಡೆ ಮಾಡೋಕೆ ನಾವು ಹೇಳಿದ್ದೆವಾ?ಮಂಡ್ಯ: “ಡಿ.ಕೆ.ಶಿವಕುಮಾರ್‌ಗೆ ದರೋಡೆ ಮಾಡೋಕೆ ನಾವು ಹೇಳಿದ್ದೆವಾ, ಇದಕ್ಕೆಲ್ಲ ನಾನು ಹೊಣೆಯೇ?’ ಎಂದು ಮೈಸೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರಂತೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, “ಕುಮಾರಸ್ವಾಮಿ ಅವರು ಈ ರೀತಿ ಮಾತನಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ನನಗೆ ಸತ್ಯ ಗೊತ್ತಿಲ್ಲ. ಸತ್ಯ ಗೊತ್ತಿಲ್ಲದೇ ನಾನೂ ಮಾತನಾಡುವುದು ತಪ್ಪು. ಕುಮಾರಸ್ವಾಮಿಯವರ ಹೇಳಿಕೆ ಬಗ್ಗೆ ಯಾರೋ ಆ ರೀತಿ ಹೇಳುತ್ತಿದ್ದರು’ ಎಂದು ಹೇಳುವ ಮೂಲಕ ಜಾರಿಕೊಂಡರು. ಪಕ್ಷ ಬಿಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ
ಬೆಂಗಳೂರು: ಪಕ್ಷ ಬಿಟ್ಟು ಹೋಗುವವರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ, ಪಕ್ಷ ಹೇಗೆ ಸಂಘಟನೆ ಮಾಡಬೇಕು ಎಂಬುದು ನನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಜಿಲ್ಲಾವಾರು ಮುಖಂಡರ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದಿಂದ ಬೆಳೆದು ಕೆಲವರು ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ. ಕಾರ್ಯಕರ್ತರನ್ನು ನಂಬಿ ಸಂಘಟನೆ ಮಾಡಿದ್ದೇನೆ. ಯಾರೇ ಪಕ್ಷ ತೊರೆದರೂ ಎದೆಗುಂದುವುದಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆಯಿದೆ. ಜೆಡಿಎಸ್ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡಲಿದೆ. ಯಾರ ಜತೆಯೂ ಮೈತ್ರಿ ಬೇಡ ಎಂದು ಹೇಳಿದರು. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡಿದರೂ ಕಾಂಗ್ರೆಸ್‌ನವರಿಂದಲೂ ಸಹಕಾರ ಸಿಗಲಿಲ್ಲ, ಇನ್ಮುಂದೆ ಆ ತಪ್ಪು ಮಾಡಲ್ಲ, ಎಲ್ಲ ಚುನಾವಣೆ ಸ್ವತಂತ್ರವಾಗಿ ಎದುರಿಸೋಣ. ಪಕ್ಷದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಬದಿಗೊತ್ತಿ ಪಕ್ಷ ಸಂಘಟನೆ ಮಾಡಿ, ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವಂತೆ ಮಾಡಿ ಎಂದು ತಿಳಿಸಿದರು. ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಉತ್ತಮ ಕೆಲಸ ಮಾಡಿದರೂ ಹೆಸರು ಬರಲಿಲ್ಲ. ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಲು ಕಾರ್ಯಕರ್ತರು ಹಾಗೂ ಮುಖಂಡರಿಗೆ ಸೂಚಿಸಿದರು. ಜನವರಿ ಅಥವಾ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ, ಪಕ್ಷ ಸದೃಢಗೊಳಿಸಬೇಕಾಗಿದೆ. ನಾನೂ ರಾಜ್ಯ ಪ್ರವಾಸ ಮಾಡಲಿದ್ದೇನೆ, ಎಚ್.ಡಿ. ಕುಮಾರಸ್ವಾಮಿಯವರೂ ಜಿಲ್ಲಾ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು. ಸೋಮವಾರ ಪಕ್ಷದ ಕಚೇರಿಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಮುಖಂಡರ ಸಭೆ ನಡೆಸಿದರು. ಬುಧವಾರ ರಾಯಚೂರು, ಯಾದಗಿರಿ, ಕಲಬುರಗಿ, ಉಡುಪಿ ಜಿಲ್ಲೆಗಳ ಸಭೆ ನಿಗದಿಯಾಗಿದೆ.