Advertisement

ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

05:55 PM Apr 15, 2021 | Team Udayavani |

ಬಂಟ್ವಾಳ: ಕಾವಳಪಡೂರು ಗ್ರಾಮದ ಅಲಂಪುರಿಯಲ್ಲಿ ಗ್ಯಾಸ್ ಸಿಲಿಂಡರ್ ನಿಂದ ಅಡುಗೆ ಅನಿಲವನ್ನು ಖಾಲಿ ಸಿಲಿಂಡರಿಗೆ ತುಂಬಿಸಿ ಮಾರಾಟ ಮಾಡುತ್ತಿದ್ದ ಗ್ಯಾಸ್ ಏಜೆನ್ಸಿಯೊಂದರ ಡೆಲಿವರಿ ಸಿಬಂದಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

Advertisement

ಖಾಲಿ ಸಿಲಿಂಡರಿಗೆ ಗ್ಯಾಸ್ ತುಂಬಿಸಿ ಮಾರಾಟ ಮಾಡುವ ಕುರಿತು ಸಂಶಯಗೊಂಡ ಗ್ರಾಮಸ್ಥರು ಕಾದು ಕುಳಿತು ಪತ್ತೆ ಹಚ್ಚಿದ್ದಾರೆ. ಆರೋಪಿಗಳು ಅಲಂಪುರಿಯ ಗುಡ್ಡ ಪ್ರದೇಶದಲ್ಲಿ ಈ ಕೃತ್ಯ ನಡೆಸುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ನಡೆಸುತ್ತಿದ್ದ ಆರೋಪಿ ಉತ್ತರ ಭಾರತ ಮೂಲದ ಕಾರ್ಮಿಕ ಜಯಪ್ರಕಾಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next