ಬಂಟ್ವಾಳ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ಶೋಷಣೆ, ಅತ್ಯಾಚಾರ ನಡೆಸಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನವೆಂಬರ್ 4 ರಂದು ಬಂಟ್ವಾಳ ತಾಲೂಕಿನ ಮಹಿಳೆಯೋರ್ವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದು ಅಪ್ರಾಪ್ತ ವಯಸ್ಕ ಬಾಲಕಿಯಾದ ತನ್ನ ಮಗಳಿಗೆ ಫರಂಗಿಪೇಟೆಯ ರಿಕ್ಷಾ ಚಾಲಕನು ಮೈ ಕೈ ಮುಟ್ಟಿ ಲೈಂಗಿಕ ಶೋಷಣೆ ಮಾಡಿದ್ದಾನೆಂದು ದೂರು ದಾಖಲಿಸಿದ್ದರು.
ಪೋಕ್ಸೋ ಆಕ್ಟ್ ರಂತೆ ಪ್ರಕರಣ ದಾಖಲಿಸಿ ಆರೋಪಿ ರಿಕ್ಷಾ ಚಾಲಕ ರಿಜ್ವಾನ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.
ಇದಾದ ಬಳಿಕ ಕಿರುಕುಳಕ್ಕೊಳಗಾದ ಅದೇ ಸಂತ್ರಸ್ತೆ ನವೆಂಬರ್ 5 ರಂದು ತನ್ನ ತಾಯಿಯೊಂದಿಗೆ ಹಾಜರಾಗಿ ಸುಮಾರು 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ತನ್ನನ್ನು ತಾವಿದ್ದಲ್ಲಿಗೆ ಕರೆಸಿಕೊಂಡು ತನ್ನ ಮೇಲೆ ಒಬ್ಬರಾದ ಮೇಲೇ ಒಬ್ಬರು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ನೀಡಿದ್ದಾರೆ
.
ಪೊಲೀಸರು ಕೇಸ್ ದಾಖಲಿಸಿ, ಆರೋಪಿಗಳಾದ ಅರ್ಕುಳದ ಮಹಮ್ಮದ್ ಖಾಸೀಂ, ಮತ್ತು ಅಜ್ಮಲ್ ಹುಸೈನ್ ಎಂಬವರುಗಳನ್ನು ಬಂಧಿಸಿದ್ದಾರೆ.