ಬೆಳಗಾವಿ: ಕೋವಿಡ್ ನಿಯಮ ಉಲ್ಲಂಘಿಸಿ ಹೋಮ, ಹವನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಶಹಾಪುರ ಠಾಣೆ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಆದರೆ ಈ ಹೋಮ ಹಾಗೂ ಹವನ ಕಾರ್ಯಕ್ರಮ ದ ನೇತೃತ್ವ ವಹಿಸಿದ್ದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ವಿರುದ್ಧ ಪ್ರಕರಣ ದಾಖಲಾಗದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲೆಯಲ್ಲಿ ನಿಷೇಧಾಜ್ನೆ ಇದ್ದರೂ ಅದನ್ನು ಲೆಕ್ಕಿಸದೆ ಶಾಸಕ ಅಭಯ ಪಾಟೀಲ ತಮ್ಮ ತಂಡದೊಂದಿಗೆ ಕಳೆದ ನಾಲ್ಕು ದಿನಗಳ ಹಿಂದೆ ಬೆಳಗಾವಿ ದಕ್ಷಿಣ ಮತ ಕ್ಷೇತ್ರದಲ್ಲಿ ಕೋವಿಡ್ ಹೋಗಲಾಡಿಸಲು ಹೊಮ ಹವನ ಮಾಡಿದ್ದರು. ಲಾಕ್ ಡೌನ್ ಸಮಯದಲ್ಲಿ ಈ ರೀತಿ ಮಾಡಿದ್ದು ಸಾಕಷ್ಟು ಟೀಕೆ ಹಾಗೂ ವಿರೋಧಕ್ಕೆ ಗುರಿಯಾಗಿತ್ತು.
ಇದನ್ನೂ ಓದಿ : ಕ್ರೂರಿ ಕೋವಿಡ್ : ಪತ್ನಿಯ ತಿಥಿ ದಿನಕ್ಕೆ ಪತಿ ಸಾವು ; ತಬ್ಬಲಿಯಾದ ಮಕ್ಕಳು
ಈ ಪ್ರಕರಣ ಸಂಬಂಧ ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ನಾಲ್ವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಹೊಮವನ್ನು ಆಯೋಜಿಸಿದ್ದ ಶಾಸಕ ಅಭಯ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಮಾಡದೇ ಇರುವುದು ಅನುಮಾನಗಳಿಗೆ ಕಾರಣವಾಗಿದೆ.