Advertisement

ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿ: 39 ಲಕ್ಷ ರೂ. ಸೊತ್ತುಗಳ ವಶ

12:00 PM Oct 12, 2021 | Team Udayavani |

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್‌ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿ 39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶಪಡಿಸಿದ್ದಾರೆ.

Advertisement

ಸಂದೇಶ ಮತ್ತು ಜಗದೀಶ ಎಂಬುವರು ಅಕ್ರಮವಾಗಿ ಮರಳು ತೆಗೆದು ಸಾಗಾಟಮಾಡುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಮರಳು ತೆಗೆಯುತ್ತಿದ್ದವರು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ಡ್ರೆಜ್ಜಿಂಗ್ ಮಿಷನ್ -1 ಮತ್ತು ನದಿ ತೀರದಲ್ಲಿ ಹಿಟಾಚಿ-1 ಹಾಗೂ ಮರಳು ತುಂಬಿದ 4  ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮರಳನ್ನು ನದಿಯಿಂದ ಕಳವು ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ ಅಂದಾಜು 39,00,000 ಲಕ್ಷ ರೂ. ಮತ್ತು ಮರಳಿನ ಅಂದಾಜು ಮೌಲ್ಯ 16,000 ರೂ.  ಸೊತ್ತುಗಳ ಸ್ವಾಧೀನ ಪಡಿಸಲಾಗಿದೆ.

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಅಕ್ರ 60-2021 ಕಲಂ 379 ಜೊತೆಗೆ 34 ಐಪಿಸಿ ದೂರು ದಾಖಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next