Advertisement

ಬಲೂನ್ ವ್ಯಾಪಾರ ಮಾಡುತ್ತಿದ್ದ 15 ಬಡ ಕುಟುಂಬಗಳನ್ನು ಎತ್ತಂಗಡಿ ಮಾಡಿದ ಪೊಲೀಸರು

04:48 PM May 30, 2021 | Team Udayavani |

ಬೆಂಗಳೂರು : ಬಲೂನ್ ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳನ್ನು ಪೊಲೀಸರು ನಿನ್ನೆ ರಾತ್ರಿ ಅಲ್ಲಿಂದ ಎತ್ತಂಗಡಿ ಮಾಡಿಸಿದ್ದಾರೆ.

Advertisement

ದಿಕ್ಕು ಕಾಣದ ಆ ವಲಸೆ ಕಾರ್ಮಿಕ ಕುಟುಂಬಗಳು ಸದ್ಯ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ.

ಇದನ್ನೂ ಓದಿ: ಸುಳ್ಯ: ಕಳ್ಳನ ಹೊಟ್ಟೆಯಲ್ಲಿತ್ತು 35 ಗ್ರಾಂ ಚಿನ್ನಾಭರಣ  

ಈ ಲಾಕ್‌ಡೌನ್, ಕೋವಿಡ್ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಮಳೆ ಗಾಳಿಯಿಂದ ರಕ್ಷಿಸಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು ಎನ್ನುವುದು ಸಾರ್ವಜನಿಕರ ಆಗ್ರಹ

Advertisement

 

Advertisement

Udayavani is now on Telegram. Click here to join our channel and stay updated with the latest news.

Next