ಬೆಂಗಳೂರು: ದೇವಾಲಯದಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿರುವ ಆರೋಪದ ಮೇಲೆ ದೇವಾಲಯದ ಧರ್ಮದರ್ಶಿ ಮುನಿಕೃಷ್ಣಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಲ್ಲೆ ನಡೆಸಿ ರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿವೆ. ಡಿ.21ರಂದು ಅಮೃತಹಳ್ಳಿಯ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಹೇಮಾವತಿ ಎಂಬಾಕೆ ಬಂದಿದ್ದರು. ನನ್ನ ಮೈ ಮೇಲೆ ದೇವರು ಬರುತ್ತೆ, ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕೂರಬೇಕು ಎಂದು ಹಠಕ್ಕೆ ಬಿದ್ದಿದ್ದರು. ಈ ವೇಳೆ ಅರ್ಚಕರು ಈ ರೀತಿಯಾಗಿ ವರ್ತಿಸದಂತೆ ಮಹಿಳೆಗೆ ತಿಳಿ ಹೇಳಿದ್ದರು. ಆದರೂ, ಕೇಳದೆ ಹೇಮಾವತಿ ಗರ್ಭಗುಡಿಯ ಒಳಗೆ ಹೋಗಲು ಯತ್ನಿಸಿದ್ದರು. ಈ ವೇಳೆ ದೇವಾಲಯದ ಸಿಬ್ಬಂದಿ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಅವರಿಗೆ ಫೋನ್ ಮಾಡಿ ವಿಚಾರ ತಿಳಿಸಿದ್ದರು. ಸ್ಥಳಕ್ಕೆ ಬಂದ ಧರ್ಮದರ್ಶಿ ಮುನಿಕೃಷ್ಣ ಈ ಬಗ್ಗೆ ಪ್ರಶ್ನಿಸಿದಾಗ ಮಹಿಳೆ ಅವರಿಗೂ ನಿಂದಿಸಿ ದ್ದಾರೆ. ಇದರಿಂದ ಕೋಪಗೊಂಡ ಮುನಿ ಕೃಷ್ಣ, ಮಹಿಳೆಯನ್ನು ಎಳೆದು ಹೊರಹಾಕಿ ದ್ದರು ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಬಳಿಕ ನಿಜ ಸಂಗತಿ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ಆರೋಪ ಏನು?: ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದೆ. ಅಲ್ಲಿ ಮುನಿಕೃಷ್ಣಪ್ಪ ಎಂಬು ವರು ನನ್ನ ಜೊತೆ ಅಸಭ್ಯವಾಗಿ ವರ್ತಿಸಿ ದ್ದಾರೆ. ಸ್ನಾನ ಮಾಡದೇ, ಶುದ್ಧಿ ಇಲ್ಲದೇ ದೇವಸ್ಥಾನಕ್ಕೆ ಬರುತ್ತೀರಾ, ನಿನಗೆ ಇಲ್ಲಿ ದರ್ಶನ ಮಾಡಲು ಅವಕಾಶ ಕಲ್ಪಿಸುವು ದಿಲ್ಲ ಎಂದು ಹೇಳಿದ್ದರು. ನಂತರ ತಲೆ ಕೂದಲು ಹಿಡಿದು ಮನಸೋಇಚ್ಛೆ ಥಳಿಸಿದರು. ಅಲ್ಲೇ ಇದ್ದ ಕಬ್ಬಿಣದ ರಾಡ್ ತೆಗೆದುಕೊಂಡು ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಮಹಿಳೆಯು ಆರೋಪಿಸಿದ್ದಾರೆ.
ಸಿಸಿ ಕ್ಯಾಮೆರಾ ದೃಶ್ಯದಲ್ಲಿ ಏನಿದೆ?: ದೇವಸ್ಥಾನದಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಹಿಡಿದು ಥಳಿಸಿದ್ದಾರೆ. ಆ ವ್ಯಕ್ತಿಯು ಮಹಿಳೆಯನ್ನು ಧರಧರನೆ ಎಳೆದು ಗುಡಿಯೊಳಗಿ ನಿಂದ ಹೊರ ಹಾಕುತ್ತಿರುತ್ತಾನೆ. ಆತ ಕಬ್ಬಿಣದ ರಾಡ್‌ನಿಂದ ಹಲ್ಲೆಗೆ ಮುಂದಾದಾಗ ಅರ್ಚಕರು ಮಹಿಳೆಯ ಸಹಾಯಕ್ಕೆ ಬಂದಿದ್ದಾರೆ.