ಗದಗ: ಹಿತ್ತಲಿನಲ್ಲಿ ಕಟ್ಟಿ ಹಾಕಿದ್ದ ಹಸು, ಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿರತೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
Advertisement
ಗದಗ ತಾಲೂಕಿನ ಅಸುಂಡಿ ಗ್ರಾಮದ ಸುಭಾಷ್ ರೆಡ್ಡಿ ಭೂಮಕ್ಕನವರ್ ಅವರಿಗೆ ಸೇರಿದ್ದ ಹಸುಗಳು ಇದಾಗಿದ್ದು, ಅವುಗಳನ್ನು ಮನೆ ಹಿತ್ತಲಲ್ಲಿ ಕಟ್ಟಿ ಹಾಕಲಾಗಿತ್ತು.
ಮುಂಜಾನೆ ಹಸು, ಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಡರಾತ್ರಿ ಚಿರತೆದಾಳಿ ಮಾಡಿ ಹಸು, ಕರುಗಳನ್ನ ಕೊಂದ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Related Articles
Advertisement