Advertisement

ಗೋವಾ: ಮಿರಮಾರ್ ಬೀಚ್ ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

12:34 PM Jul 16, 2022 | Team Udayavani |

ಪಣಜಿ: ಪಣಜಿಯ ಸಮೀಪದ ಮಿರಮಾರ್ ಬೀಚ್ ನಲ್ಲಿ ಶನಿವಾರ ಅಪರಿಚಿತ ಮೃತದೇಹ ಪತ್ತೆಯಾಗಿದೆ.

Advertisement

ಮೃತದೇಹ ಮಹಿಳೆಯದ್ದಾಗಿದ್ದು, ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ ಅಥವಾ ಬೇರೆ ಕಾರಣದಿಂದ ಸಾವನ್ನಪ್ಪಿದ್ದಾಳೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ  ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದಿದ್ದಾರೆ. ಪಂಚನಾಮೆಯ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಮಹಾವಿದ್ಯಾಲಯಕ್ಕೆ  ಕಳುಹಿಸಲಾಗಿದೆ.

ಈ ಕುರಿತಂತೆ ಪೊಲೀಸರು ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next