Advertisement

ಗುಂಡ್ಲುಪೇಟೆ : ಕೆರೆಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು

05:39 PM Aug 27, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಯುವಕನೋರ್ವ ಕೆರೆಯಲ್ಲಿ ಕಾಲುಜಾರಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬರಗಿ ಕೆರೆಯಲ್ಲಿ ನಡೆದಿದೆ.

Advertisement

ತಾಲೂಕಿನ ಕಾಡಂಚಿನ ಗ್ರಾಮವಾದ ಮೂಖಹಳ್ಳಿ ಕಾಲೋನಿಯ ನಾಗರಾಜು(35) ಮೃತ ಯುವಕ. ಮೃತ ನಾಗರಾಜುಗೆ ಪತ್ನಿ ಮತ್ತು 7 ವರ್ಷದ ಪುತ್ರ ಇದ್ದಾರೆ. ಶುಕ್ರವಾರ ಮಧ್ಯಾಹ್ನ ಮನೆಯಿಂದ ಹೊರ ಹೋದವರು ಮರಳಿ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಹುಡುಕಾಟ ನಡೆಸಿದರು.

ಮರು ದಿನ ಶನಿವಾರ ಬೆಳಗ್ಗೆ ಕೆರೆಯಲ್ಲಿ ಶವ ಇರುವುದು ಪತ್ತೆಯಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ನಂತರ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕರೆಸಿ ಕಾರ್ಯಾಚರಣೆ ನಡೆಸುವ ಮೂಲಕ ಕೆರೆಯಲ್ಲಿದ್ದ ಶವವನ್ನು ಹೊರ ತೆಗೆದಿದ್ದಾರೆ.

ನಂತರ ಶವವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಇನ್ನು ಘಟನೆ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next