ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್ ಎದುರಿನ ಕಟ್ಟಡದಲ್ಲಿನ ಸ್ಟೇಶನರಿ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಆಕಸ್ಮಿಕದಲ್ಲಿ, ಅಂದಾಜು ಐದು ಲಕ್ಷ ರೂ.ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ರೂಪಾ ಸ್ಟೇಶನರಿ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ರಾಜ್ಯದ ಆಡಳಿತದ ಆರೋಗ್ಯ ಸರಿಯಾಗಬೇಕು : ಹೆಚ್ ವಿಶ್ವನಾಥ್
ನಾಗರಾಜ ಗೊಡಚಿ ಎಂಬುವರಿಗೆ ಸೇರಿದ ಸ್ಟೇಶನರಿ ಅಂಗಡಿಯಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ, ಹೆಚ್ಚಿನ ಹಾನಿ ತಪ್ಪಿಸಿದ್ದಾರೆ. ಇಲ್ಲವಾದರೆ ಪಕ್ಕದ ಮಳಿಗೆಗಳಿಗೂ ಬೆಂಕಿ ವ್ಯಾಪಿಸುತ್ತಿತ್ತು.