ಕಡಬ: ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ತೆಯಾಗಿದ್ದ ಅಪ್ರಾಪ್ತೆ ಯುವತಿಯ ಮೇಲೆ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಅತ್ಯಾಚಾರವೆಸೆಗಿದ್ದಾನೆ ಎನ್ನುವ ಆರೋಪಕ್ಕೆ, ಸಂತ್ರಸ್ತೆ ಯುವತಿಯ ತಂದೆ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ.
ಯುವತಿ ಎರಡು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ಎಂಬಾತ ಯಾವುದೋ ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದು ,ಪರಿಚಯವಾಗಿದ್ದ, ಪ್ರಕರಣ ಮುಗಿದಿದ್ದರೂ ಶಿವರಾಜ್ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿದ್ದ, ಈ ವೇಳೆ ತಾನು ಮದುವೆಯಾಗುವುದಾಗಿ ಯುವತಿಗೆ ಒಪ್ಪಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.
ಇತ್ತೀಚಿಗೆ ಯುವತಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಈ ವೇಳೆ ಯುವತಿ ನನಗೆ ಐದೂವರೆ ತಿಂಗಳು ಆಗಿದೆ ಎಂದು ಸತ್ಯ ಬಾಯಿಬಿಟ್ಟಿದ್ದಳು. ಸತ್ಯ ಹೊರ ಬಂದ ಬಳಿಕ ಶಿವರಾಜ್ ನಾನಾ ಕಾರಣ ಕೊಟ್ಟು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯ ತಂದೆ ಶಿವರಾಜ್ ವಿರುದ್ಧ ದೂರು ದಾಖಲಿಸಿದ್ದಾರೆ.
ಅತ್ಯಾಚಾರ ಎಸಗಿರುವ ಶಿವರಾಜ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು, ಮತ್ತು ನನ್ನ ಮಗಳು ಹಾಗೂ ಪತ್ನಿ ಶಿವರಾಜ್ ಅವನ ಸುಪರ್ಧಿಯಲ್ಲಿ ಮಂಗಳೂರಿನ ಅಜ್ಞಾತ ಸ್ಥಳದಲ್ಲಿರುವ ಅವರನ್ನು ಪತ್ತೆ ಹಚ್ಚಬೇಕು, ಇದಕ್ಕೆಲ್ಲ ಪೋಲಿಸ್ ಪ್ರಭಾವ ಬಳಸಿ ನಮ್ಮನ್ನು ಬೆದರಿಸುತ್ತಿರುವ ಶಿವರಾಜ್ ವಿಚಾರಣೆ ನಡೆಸಿದಾಗ ಎಲ್ಲ ವಿಚಾರ ಬಹಿರಂಗವಾಗಲಿದೆ, ಆದುದರಿಂದ ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಕೊಡುವಿರಾ ಎಂದು ಅವರು ವಿನಂತಿಸಿದ್ದಾರೆ.
ವಿ.ಹಿಂ.ಪ. ಹೋರಾಟದ ಎಚ್ವರಿಕೆ:
ಈ ಮಧ್ಯೆ ಆರೋಪಿಯನ್ನು ಅಮಾನತುಗೊಳಿಸಿ, ಕ್ರಮ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ,ಇನ್ನಾದರೂ ಕ್ರಮ ಕೈಗೊಳ್ಳಬಹುದಲ್ಲವೇ ಎಂದು ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಭಾಸ್ಕರ ಧರ್ಮಸ್ಥಳ, ಕಡಬ ಪ್ರಖಂಡ ಅಧ್ಯಕ್ಷ ರಾಧಾಕೃಷ್ಣ , ಕಾರ್ಯದರ್ಶಿ ಪ್ರಮೋದ್ ರೈ ಅವರುಗಳು ಎಚ್ಚರಿಸಿದ್ದಾರೆ.