Advertisement
ಕುಂದಾಪುರದ ವಡೇರಹೋಬಳಿ ಜೆಎಲ್‌ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಪುತ್ರ ಸಾಯೀಶ್ ಶೆಟ್ಟಿ (18) ನದಿಗೆ ಹಾರಿ, ನಾಪತ್ತೆಯಾಗಿರುವ ವಿದ್ಯಾರ್ಥಿ.
Related Articles
Advertisement
ಸೇತುವೆ ಮೇಲಿಂದ ನದಿಗೆ ಹಾರಿದ್ದನ್ನು ಗಮನಿಸಿದ ವಾಹನ ಸವಾರರು ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು, ಮುಳುಗು ತಜ್ಞರು ಹಾಗೂ ಸ್ಥಳೀಯರು ವಿದ್ಯಾರ್ಥಿಯ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದರು. ಬುಧವಾರ ರಾತ್ರಿಯಿಡೀ ನಿರಂತರ ಮಳೆಯಿಂದ ನದಿ ನೀರಿನ ಹರಿವು ಹೆಚ್ಚಿದ್ದು, ನೀರಿನ ಮಟ್ಟವೂ ಜಾಸ್ತಿಯಿದ್ದು, ಶೋಧ ಕಾರ್ಯಕ್ಕೆ ತೊಡಕಾಗಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ಭೇಟಿ ನೀಡಿ, ಪರಿಶೀಲಿಸಿದರು. ಕುಂದಾಪುರ ಎಸ್‌ಐ ಸದಾಶಿವ ಗವರೋಜಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.
ಸೇತುವೆಯಿಂದ ಯುವಕನೊಬ್ಬ ಹಾರಿದ ಸುದ್ದಿ ತಿಳಿಯುತ್ತಿದ್ದಂತೆ ಕುಂದಾಪುರ ಪರಿಸರದ ಸುತ್ತಮುತ್ತಲಿನ ಜನ ಬಂದು, ಶೋಧ ಕಾರ್ಯಾಚರಣೆಯನ್ನು ವೀಕ್ಷಿಸುತ್ತಿದ್ದುದು ಕಂಡು ಬಂತು. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದವರು ಸಹ ಸೇತುವೆ ಮೇಲೆ ನಿಂತು ಕುತೂಹಲದಿಂದ ವೀಕ್ಷಿಸುತ್ತಿದ್ದರು.
ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.