Advertisement

ಮಡಿಕೇರಿ: ಕಾರುಗುಂದದಲ್ಲಿ ಗೋಮಾಂಸ ಸಾಗಾಟ; ಆರೋಪಿಗಳು ಪೊಲೀಸ್‌ ವಶ

07:11 PM Aug 04, 2022 | Team Udayavani |

ಮಡಿಕೇರಿ: ಗೋಮಾಂಸ ಸಾಗಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕರಿಬ್ಬರನ್ನು ನಾಪೋಕ್ಲು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಇಬ್ಬರು ಕಾರ್ಮಿಕರು ಗೋಮಾಂಸವನ್ನು ಚೀಲಗಳಲ್ಲಿ ತುಂಬಿಕೊಂಡು ಕಾರುಗುಂದದ ಮೂಲಕ ಸಾಗಾಟ ಮಾಡುತ್ತಿರುವ ಬಗ್ಗೆ ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ಗೋಮಾಂಸ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದರು. ಗೋಮಾಂಸವನ್ನು ಸುಂಟಿಕೊಪ್ಪಕ್ಕೆ ಕೊಂಡೊಯ್ಯಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಅಸಮಾಧಾನ :

ರಾಜ್ಯದಲ್ಲಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ನಿಷೇಧವಿದ್ದರೂ ಕೊಡಗು ಜಿಲ್ಲೆಯಲ್ಲಿ ಗೋವುಗಳ ಕಳ್ಳತನ, ಹತ್ಯೆ ಮತ್ತು ಗೋಮಾಂಸ ಮಾರಾಟ ನಿರಂತರವಾಗಿದೆ ಎಂದು ಹಿಂದೂ ಜಾಗರಣಾ ವೇದಿಕೆಯ ಕೊಡಗು ಜಿಲ್ಲಾ ಘಟಕ ತೀವ್ರ ಅಸಮಧಾನ ವ್ಯಕ್ತಪಡಿಸಿದೆ.

ಪೊಲೀಸರು ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next