Advertisement

ಸಾಗರ: ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

03:51 PM Oct 18, 2021 | Suhan S |

ಸಾಗರ: ತಾಲೂಕಿನ ಜೋಗದಲ್ಲಿ ಮನೆಯ ಸಮೀಪವೇ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

Advertisement

ಜೋಗದ ನಿವಾಸಿ ಗಂಗಾಧರ್ (38) ಮೃತ ವ್ಯಕ್ತಿ. ಗಂಗಾಧರ್ ಮದ್ಯವ್ಯಸನಿಯಾಗಿದ್ದು,ನಿನ್ನೆ ರಾತ್ರಿ ಸಹ ವಿಪರೀತ ಕುಡಿದು ಬಂದು ಪತ್ನಿ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ.

ತದ ನಂತರ ಮನೆಯ ಹೊರಗೆ ಇರುವ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಸ್ಥಳಕ್ಕೆ ಜೋಗ ಪೊಲೀಸ್ ಠಾಣೆ ಪಿಎಸ್‌ಐ ನಿರ್ಮಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next