Advertisement

ಬೈಕ್ ಗೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

05:50 PM May 19, 2021 | Team Udayavani |

ಸೊರಬ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಣ್ಣತ್ತಿ ಗ್ರಾಮದಲ್ಲಿ ಬುಧವಾರ ನಡೆದಿದೆ.

Advertisement

ನ್ಯಾರ್ಸಿ ಗ್ರಾಪಂ ಸದಸ್ಯ ಪುರುದೂರು ಗ್ರಾಮದ ಈರಪ್ಪಯ್ಯ ಅವರ ಪುತ್ರ  ಪ್ರತಾಪ್ ( 22) ಮೃತ ಬೈಕ್ ಸವಾರ. ಮಣ್ಣತ್ತಿಯಿಂದ ಚಂದ್ರಗುತ್ತಿ ಮಾರ್ಗವಾಗಿ ಚಲಿಸುತ್ತಿದ್ದ ಟಿಪ್ಪರ್ ಮಣ್ಣತ್ತಿ ಕ್ರಾಸ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಪುರುದೂರು ಗ್ರಾಮದ ಗುರು (22) ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಿಎಸ್ಐ ಟಿ.ಬಿ. ಪ್ರಶಾಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸೊರಬ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಹೆಚ್ಚಿದ ಕೋವಿಡ್ : ಕಾಫಿ ನಾಡಿನಲ್ಲಿ ನಾಲ್ಕು ದಿನ ಕಠಿಣ ಲಾಕ್ ಡೌನ್

Advertisement

Udayavani is now on Telegram. Click here to join our channel and stay updated with the latest news.

Next