Advertisement

ಸುಳ್ಯ:  ಬೆಂಕಿ ಅವಘಡ; ಗಾಯಾಳು ಸಾವು

08:51 PM Jul 24, 2022 | Team Udayavani |

ಸುಳ್ಯ: ಬೆಂಕಿ ಅವಘಡದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ ಘಟನೆ ಜು. 23ರಂದು ಸಂಭವಿಸಿದೆ.

Advertisement

ಸುಳ್ಯ ತಾಲೂಕಿನ ಕಳಂಜ ಗ್ರಾಮದ ಬಾಳೆಗುಡ್ಡೆ ಕುಂಞಣ್ಣ ನಾಯ್ಕರ ಪುತ್ರಿ ಕುಸುಮಾ (41) ಮೃತರು.

ಅವರು ಜು. 20ರಂದು ಬೆಳಗ್ಗೆ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next