Advertisement

ಬ್ರಹ್ಮಾವರ: ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

04:26 PM Jul 10, 2021 | Team Udayavani |

ಉಡುಪಿ: ಎರಡು ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಬ್ರಹ್ಮಾವರದ ಬೈಕಾಡಿ ಗ್ರಾಮದ ಕಾಮೇಶ್ವರ ದೇವಸ್ಥಾನ ವಠಾರದ ನಿವಾಸಿ ಶ್ರೀಧರ ಮಯ್ಯ (60) ಮೃತದೇಹ ಇಂದು ಬೆಳಿಗ್ಗೆ ಸಂತೆಕಟ್ಟೆ ಸಮೀಪದ ಉಪ್ಪೂರು ನದಿಯಲ್ಲಿ ಪತ್ತೆಯಾಗಿದೆ.

Advertisement

ಇಂದು ಬೆಳಿಗ್ಗೆ ಉಪ್ಪೂರು ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಮೃತದೇಹವನ್ನು ಮೇಲೆತ್ತಿದ್ದಾರೆ.‌ ಮೃತದೇಹವನ್ನು ಶ್ರೀಧರ ಮಯ್ಯ ಅವರದೆಂದು  ಅವರ ಪತ್ನಿ ಹಾಗೂ ಪುತ್ರಿ ಗುರುತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೋಟೆ ಗ್ರಾಮ ಪಂಚಾಯತ್ ಸದಸ್ಯೆ ಕ್ಯಾನ್ಸರ್ ಗೆ ಬಲಿ

ಶ್ರೀಧರ ಮಯ್ಯ ಜುಲೈ 8ರಂದು ಸಂಜೆ ಕೋರ್ಟ್ ಕೇಸಿನ ವಿಚಾರವಾಗಿ ಚಿಕ್ಕಮಗಳೂರಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ತೆರಳಿದ್ದರು. ಅವರು ತೆರಳಿದ ಬಳಿಕ ಮಯ್ಯ ಬರೆದಿದ್ದಾರೆ ಎನ್ನಲಾದ ರಿಜಿಸ್ಟರ್ಡ್‌ ಪತ್ರವೊಂದು ದೇವಸ್ಥಾನಕ್ಕೆ ಬಂದಿದ್ದು, ದೇವಸ್ಥಾನದ ಅಧ್ಯಕ್ಷರಿಗೆ ಬರೆದ ಆ ಪತ್ರದಲ್ಲಿ “ನನಗೆ ತುಂಬಾ ಆರೋಗ್ಯ ಸಮಸ್ಯೆ ಕಾಡುತ್ತಿದೆ. ವಿಪರೀತ ಕಾಲುನೋವು ಹಾಗೂ ವಿಪರೀತ ಬಿಕ್ಕಳಿಕೆಯಿಂದ ಬದುಕಿನಲ್ಲಿ ಜಿಗುಪ್ಸೆಗೊಂಡಿದ್ದು, ಜೀವನವೇ ಬೇಡವೆನಿಸಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಅದರಲ್ಲಿ ಬರೆಯಲಾಗಿತ್ತು. ಈ ಪತ್ರ ಸಿಕ್ಕದ ಕೂಡಲೇ ಮನೆಯವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next