ಬೆಂಗಳೂರು: ಮನೆ ಬಳಿ ಆಟವಾಡುತ್ತಿದ್ದ ನಾಲ್ಕು ವರ್ಷದ ಹೆಣ್ಣು ಮಗುವನ್ನು ಮಾನಸಿಕ ಅಸ್ವಸ್ಥನೊಬ್ಬ ಎತ್ತಿಕೊಂಡು ಹೋಗಲು ಯತ್ನಿಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬುಧವಾರ ಸಂಜೆ ಮನೆಗಳ ಮುಂದೆ ನಿಂತುಕೊಂಡು ಆಟವಾಡುವ ಮಕ್ಕಳನ್ನು ಟಾರ್ಗೆಟ್ ಮಾಡಿ ಅವರಿಗೆ ಗದರಿಸುತ್ತಿದ್ದ. ಜತೆಗೆ, ಮಕ್ಕಳನ್ನು ಮಾತನಾಡಿಸಲು ಮುಂದಾಗುತ್ತಿದ್ದ. ಆತನ ವರ್ತನೆ ನೋಡಿ ಜನರು ಆತಂಕಗೊಂಡಿದ್ದರು.
ಕೆಂಪೇಗೌಡ ಸರ್ಕಲ್ ಬಳಿ ಕಾರ್ಮಿಕರೊಬ್ಬರ 4 ವರ್ಷದ ಮಗುವನ್ನು ಹೆಗಲಮೇಲೆ ಎತ್ತಿಕೊಂಡು ಹೋಗಲು ಯತ್ನಿಸಿದ್ದಾನೆ. ಅದನ್ನು ನೋಡಿದ ಸ್ಥಳೀಯರು ಕೂಡಲೇ ಅತನಿಂದ ಮಗುವನ್ನು ಬಿಡಿಸಲು ಮುಂದಾಗಿದ್ದು, ಈ ವೇಳೆ ಮಗು ನೀಡದೆ ಹಲ್ಲೆಗೆ ಮುಂದಾಗಿದ್ದಾನೆ.
ಇದನ್ನೂ ಓದಿ:- ಸಾಲ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ..!
ಈ ಕುರಿತು ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಾಗ ಆತ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿದೆ. ಪೊಲೀಸರು ಆತ ನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.