Advertisement

ಮೂಳೂರು: ಕಾರು ಢಿಕ್ಕಿ ಹೊಡೆದು ಮಹಿಳೆ ಮೃತ್ಯು

04:26 PM Oct 23, 2021 | Team Udayavani |

ಕಾಪು: ಕಾರು ಢಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಳೂರು ಯೂನಿಯನ್ ಬ್ಯಾಂಕ್ ಬಳಿ ಶನಿವಾರ ಸಂಭವಿಸಿದೆ.

Advertisement

ಮೂಳೂರು ಪಡು ನಿವಾಸಿ ಆಯಿಶಾ (42) ಮೃತ ದುರ್ಧೈವಿ.

ಅಗತ್ಯ ವಸ್ತು ಖರೀದಿಸಲು ಪೇಟೆಗೆ ಬಂದಿದ್ದ ಅವರು ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರಿನತ್ತ ತೆರಳುತ್ತಿದ್ದ ಬಲೆನೋ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ  ಮೃತಪಟ್ಟಿದ್ದಾರೆ.

Advertisement

ಕಾಪು ಎಸ್ ಐ ರಾಘವೇಂದ್ರ ಸಿ.,ಕ್ರೈಂ ಎಸ್ಸೈ ತಿಮ್ಮೇಶ್ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next