ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿಸಿದ ಹಿನ್ನಲೆಯಲ್ಲಿ ಐತಿಹಾಸಿಕ ಹಂಪಿಯ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಪುರಂದರ ಮಂಟಪ ಹಾಗೂ ವಿವಿಧ ಸ್ಮಾರಕಗಳು ಜಲಾವೃತವಾಗಿವೆ.
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಏರಿಕೆಯಾದ ಹಿನ್ನಲೆಯಲ್ಲಿ ಡ್ಯಾಂನಿಂದ 40,500 ಕ್ಯುಸೆಕ್ ನೀರು ಬುಧವಾರ ಕೂಡ ನದಿಗೆ ಹರಿಸಲಾಯಿತು.
ಇದನ್ನೂ ಓದಿ:ಬುಸಾನ್ ಫಿಲ್ಮ್ ಫೆಸ್ಟ್‌ಗೆ “ದೀಪ್ 6 ’ ಸಿನಿಮಾ
ಜಲಾಶಯದಿಂದ ಮತ್ತೊಮ್ಮೆ ನದಿಗೆ ನೀರು ಹರಿಸಲಾಗುತ್ತಿದೆ. ಹಾಗಾಗಿ ಹಂಪಿಯ ಪುರಂದರ ಮಂಟಪ, ವೈದಿಕ ಮಂಟಪ, ಸ್ನಾನಘಟ್ಟ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತಗೊಂಡಿವೆ. ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಡ್ಯಾಂನ ಒಳ ಹರಿವು ಹೆಚ್ಚಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಜಲಾಶಯದ 12 ಗೇಟ್‌ಗಳನ್ನು ತಲಾ 2 ಅಡಿ ಎತ್ತರಿಸಿ ನದಿಗೆ 40,500 ಕ್ಯುಸೆಕ್ ನೀರು ಹರಿಸಲಾಗಿದೆ.
ತುಂಗಭದ್ರಾ ಜಲಾಶಯದಿಂದ ನೀರು ಹೊರಬಿಟ್ಟಿರುವುದರಿಂದ ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಈಗಾಗಲೇ ತುಂಗಭದ್ರಾ ಮಂಡಳಿ ಅಲರ್ಟ್ ಘೋಷಣೆ ಮಾಡಿದೆ.