Advertisement

ವಾಹನ ಡಿಕ್ಕಿ,ಅಪರಿಚಿತ ಮಹಿಳೆ ಸಾವು

07:39 PM Sep 05, 2021 | Team Udayavani |

ಶ್ರೀರಂಗಪಟ್ಟಣ: ಕಾರೊಂದು ಅಪರಿಚಿತ ಮಹಿಳೆಗೆ ಡಿಕ್ಕಿ  ಹೊಡೆದ ಪರಿಣಾಮ ಸುಮಾರು 60 ವರ್ಷದ ಮಹಿಳೆ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಶ್ರೀರಂಗಪಟ್ಟಣದ ಅಗ್ನಿಶಾಮಕ ಠಾಣೆಯ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು,ಅಪರಿಚಿತ ಮಹಿಳೆಯ ರುಂಡ ಮುಂಡ ಬೇರೆ ಬೇರೆಯಾಗಿದೆ.ಡಿಕ್ಕಿ ಹೊಡೆದ ಕಾರು ಕೂಡ ಜಖಂ ಗೊಂಡಿದ್ದು ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:ಭಾರಿ ಮಳೆಯಾಗುವ ಸಾಧ್ಯತೆ: ಗೋವಾದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next