Advertisement

ಕುಳಗಿ ರಸ್ತೆಯಲ್ಲಿ ಮಟ್ಕಾ ಆಡಿಸುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ- ಪ್ರಕರಣ ದಾಖಲು

09:21 PM Sep 01, 2021 | Team Udayavani |

ದಾಂಡೇಲಿ : ನಗರದ ಕುಳಗಿ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ಆಡಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಮಟ್ಕಾ ಜೂಜಾಟಕ್ಕೆ ಬಳಸುತ್ತಿದ್ದ ನಗದನ್ನು ವಶಪಡಿಸಿಕೊಂಡಿರುವ ಘಟನೆ ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ನಗರದ ಗಾಂಧಿನಗರದ, ಆಶ್ರಯ ಕಾಲೋನಿ ನಿವಾಸಿ 34 ವರ್ಷ ವಯಸ್ಸಿನ ಸೈಯದ್ ಅಲಿ ಹಮೀದ್ ಲಷ್ಕರವಾಲೆ ಎಂಬಾತನು ಕುಳಗಿ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತಮ್ಮ ಲಾಭಕ್ಕಾಗಿ ಅದೃಷ್ಟದ ಅಂಕೆ ಬಂದಲ್ಲಿ ಒಂದು ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಅಂಕೆ ಸಂಖ್ಯೆ ಮೇಲೆ ಹಣವನ್ನು ಪಂಥಕ್ಕೆ ಕಟ್ಟಿಸಿಕೊಂಡು ಓ.ಸಿ,ಮಟ್ಕಾ ಜೂಜಾಟ ಆಡಿಸುತ್ತಿದ್ದನು.

ಇದನ್ನೂ ಓದಿ:‘ಮುಸ್ಲೀಮರ ಕ್ಯಾನ್ಸರ್ ಚಿಕಿತ್ಸೆಗೆ ಹಣ’ ನನ್ನ ಯೋಜನೆಯಲ್ಲ: ಸಚಿವೆ ಶಶಿಕಲಾ ಸ್ಪಷ್ಟೀಕರಣ

ಈ ಸಂದರ್ಭದಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯ ಪಿಎಸೈ ಯಲ್ಲಪ್ಪ.ಎಸ್ ಅವರ ನೇತೃತ್ವದ ತಂಡ ದಾಳಿ ನಡೆಸಿ ಮಟ್ಕಾ ಬರೆದಿರುವ ಚೀಟಿ ಹಾಗೂ ನಗದು ರೂ: 1015/- ಮತ್ತು ಆರೋಪಿಯನ್ನು ವಶಕ್ಕೆ ಪಡೆದು ಕಲಂ 78(3) ರ ಕೆ.ಪಿ.ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next