Advertisement

ಪಂಚಲಕ್ಷ ಪಾದಯಾತ್ರೆಯಲ್ಲಿ ಸಿಎಂ ಬಿಎಸ್‌ವೈ ಪ್ರತಿಕೃತಿ ದಹನ

03:18 PM Jan 31, 2021 | Team Udayavani |

ದಾವಣಗೆರೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಒತ್ತಾಯಿಸಿ ಕೂಡಲಸಂಗಮದಿಂದ ಆರಂಭವಾಗಿರುವ ಪಂಚಲಕ್ಷ ಪಾದಯಾತ್ರೆ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಿಂದ ಶನಿವಾರ ಕ್ರಾಂತಿ ರೂಪ ಪಡೆದುಕೊಂಡಿತು.

Advertisement

ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರು, ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಬಾರುಕೋಲು ಬೀಸಿ ಹೋರಾಟದ ತೀವ್ರತೆ ಹೆಚ್ಚಿಸಿದರು. ಪಾದಯಾತ್ರೆ ನಗರದ ಗಾಂಧಿ ವೃತ್ತ ತಲುಪುತ್ತಿದ್ದಂತೆ ಪಂಚಮಸಾಲಿ ಸಮಾಜದ ಪ್ರಮುಖರು, ಉಭಯ ಶ್ರೀಗಳಸಮ್ಮುಖದಲ್ಲಿಯೇ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ  ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಸಂದರ್ಭ ಮಾತನಾಡಿದ ಉಭಯ ಶ್ರೀಗಳು ಹಾಗೂ ಸಮಾಜದ ಮುಖಂಡರು, ಪಾದಯಾತ್ರೆ ಮುಂದೆ ಸಾಗುತ್ತಿದ್ದಂತೆ ಇನ್ನಷ್ಟು ಉಗ್ರರೂಪ ತಾಳುತ್ತದೆ. ಇದರಿಂದ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೇ ಹೊಣೆ ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next