ಸಕಲೇಶಪುರ: ಹಣೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪದ ಬನವಾಸೆ ಗ್ರಾಮದಲ್ಲಿ ನಡೆದಿದೆ.
ಬಸವಲಿಂಗಪ್ಪ (71) ಮೃತಪಟ್ಟ ದುರ್ದೈವಿಯಾಗಿದ್ದು ಗುರುವಾರ ಸಂಜೆ ತಮ್ಮ ಮನೆಯಲ್ಲಿ ಬಂದೂಕಿನಿಂದ ತಮ್ಮ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಧರ್ಭದಲ್ಲಿ ಮೃತರ ಪತ್ನಿ ಮನೆಯ ಹೊರಗಡೆ ಇದ್ದರು ಎಂದು ತಿಳಿದು ಬಂದಿದ್ದು ಗುಂಡು ಹಾರಿದ ರಭಸಕ್ಕೆ ತಲೆ ಚಿಂದಿ ಚಿಂದಿಯಾಗಿದೆ. ಗುಂಡಿನ ಶಬ್ದಕ್ಕೆ ಅಕ್ಕಪಕ್ಕದ ಮನೆಯವರು ಬೆಚ್ಚಿಬಿದ್ದಿದ್ದಾರೆ.
ಇದನ್ನೂ ಓದಿ:ಮಳೆ ಅಬ್ಬರ: ಬಸ್ ನಿಲ್ದಾಣ ಸಹಿತ ಬಡಾವಣೆಗಳು ಮುಳುಗಡೆ
ಕಳೆದ ಕೆಲವು ವರ್ಷಗಳಿಂದ ಮೃತರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದ್ದು, ಸಕಲೇಶಪುರ ಗ್ರಾಮಾಂತರ ಠಾಣಾವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಆರಕ್ಷಕ ವೃತ್ತ ನಿರೀಕ್ಷಕ ಚೈತನ್ಯ ಕುಮಾರ್ ಬಂದು ಪರಿಶೀಲನೆ ನಡೆಸಿದ್ದಾರೆ. ಮೃತರು ಪತ್ನಿ ಹಾಗೂ ವಿದೇಶದಲ್ಲಿರುವ ಪುತ್ರ ಹಾಗೂ ಅಪಾರ ಪ್ರಮಾಣದ ಬಂಧು ಬಳಗವನ್ನು ಅಗಲಿದ್ದಾರೆ.