Advertisement

ಅತ್ಯಾಚಾರವೆಸಗಲು ಮುಂದಾದ ವ್ಯಕ್ತಿಯ ಮರ್ಮಾಂಗ ಕತ್ತರಿಸಿದ ಮಹಿಳೆ

08:37 PM Mar 20, 2021 | Team Udayavani |

ನವದೆಹಲಿ: ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ವ್ಯಕ್ತಿಯೊಬ್ಬನ ಮರ್ಮಾಂಗವನ್ನು ಮಹಿಳೆಯೊಬ್ಬಳು ಕತ್ತರಿಸಿದ ಘಟನೆ ಮಧ‍್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ  ನಡೆದಿದೆ.

Advertisement

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು,  ಜಿಲ್ಲೆಯಿಂದ ಸುಮಾರು 50 ಕಿ. ಮೀ ದೂರದಲ್ಲಿರುವ  ಉಮರಿಹಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದಿದ್ದಾರೆ.

ಘಟನೆಯ ವಿವರ

ಮಹಿಳೆ ತನ್ನ ದೂರಿನಲ್ಲಿ ತಿಳಿಸಿರುವ ಪ್ರಕಾರ, ಆಕೆಯ ಪತಿ ತನ್ನ ಕಾರ್ಯದ ನಿಮಿತ್ತ ಹೊರಗಡೆ ತೆರಳಿದ್ದ ಸಮಯದಲ್ಲಿ, ಅಂದಾಜು 45 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಪ್ರವೇಶಿಸಿದ್ದಾನೆ.

ಈ ಸಮಯದಲ್ಲಿ ಆಕೆಯ 13 ವರ್ಷದ ಮಗ ಅಪರಿಚಿತ ವ್ಯಕ್ತಿಯನ್ನು ಕಂಡು ಗಾಬರಿಗೊಂಡಿದ್ದು, ತಕ್ಷಣವೇ ಮನೆಯಿಂದ ಹೊರಗಡೆ ಓಡಿ ಹೋಗಿದ್ದಾನೆ. ಆ ಬಳಿಕ ಅಪರಿಚಿತ ವ್ಯಕ್ತಿ ಮಹಿಳೆಯನ್ನು ತಳಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.

Advertisement

ಇದನ್ನೂ ಓದಿ:ವಿಶ್ವ ಹ್ಯಾಪಿನೆಸ್ ವರದಿ 2021 : ಫಿನ್ ಲ್ಯಾಂಡ್ ಗೆ ಮೊದಲ ಸ್ಥಾನ, ಭಾರತಕ್ಕೆ?

ಮಹಿಳೆಯ ದೂರಿನನ್ವಯ ಮಾಹಿತಿ ನೀಡಿರುವ ಪೊಲೀಸರು, ಅಪರಿಚಿತ ವ್ಯಕ್ತಿ ಮಹಿಳೆಯ  ಮೇಲೆ ದೌರ್ಜನ್ಯ ಎಸಗಲು ಯತ್ನಿಸಿದಾಗ, ಆಕೆ ಸುಮಾರು 20 ನಿಮಿಷಗಳ ಕಾಲ ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಕೊನೆಯಲ್ಲಿ ದಾರಿ ಕಾಣದೆ ತನ್ನನ್ನು ತಾನು ರಕ್ಷಿಸಿಕೊಳ್ಳಲು ಬೆಡ್ ನ ಕೆಳಗೆ ಇದ್ದ ಮಾರಕಾಸ್ತ್ರದಿಂದ ವ್ಯಕ್ತಿಯ ಜನನಾಂಗವನ್ನು ಕತ್ತರಿಸಿದ್ದಾಳೆ ಎಂದಿದ್ದಾರೆ.

ಘಟನೆಯ ಬಳಿಕ ಮಹಿಳೆ  ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಆರೋಪಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ರೆವಾ ಜಿಲ್ಲೆಯಲ್ಲಿರುವ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಹಾಸ್ಪಿಟಲ್ ಗೆ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಈ ನಡುವೆ ಆರೋಪಿ ಕೂಡ ಮಹಿಳೆಯ ವಿರುದ್ಧ ದೂರು ದಾಖಲಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next