Advertisement
ಕಳೆದ ಎರಡು ದಿನಗಳಿಂದ ಈ ಸಮಸ್ಯೆ ಉಲ್ಬಣವಾಗಿದ್ದು ಗ್ರಾಮದಲ್ಲಿನ ನೀರಿಗೆ ಚರಂಡಿ ನೀರು ಸೇರ್ಪಡೆ ಆಗಿ, ಇದೇ ಕಲುಷಿತ ನೀರು ಸೇವನೆ ಮಾಡಿರುವ ಗ್ರಾಮದ ನಿವಾಸಿಗಳು ತೀವ್ರ ಅನಾರೋಗ್ಯಕ್ಕಿಡಾಗಿ ಜೀವಣ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.
Related Articles
Advertisement
ಆಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಯರಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಈ ಘಟನೆಯ ಬಗ್ಗೆ ಮಾಹಿತಿಯೇ ಇಲ್ಲವೆಂದು ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ
ಯರಗಲ್ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಗರಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎಂ.ಎಸ್.ಪಾಟೀಲ ನೇತೃತ್ವದ ಆರೋಗ್ಯ ಇಲಾಖೆಯ ತಂಡದಿಂದ ಗ್ರಾಮಸ್ಥರ ಆರೋಗ್ಯವನ್ನು ತಪಾಸಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಾತ್ರೆಗಳನ್ನು ವಿತರಿಸಲಾಗಿದೆ.
ಮನೆ ಮನೆಗೂ ನಲ್ಲಿ ನೀರು ಕೊಡುವ ಯೋಜನೆ ಅಸಮರ್ಪಕ ಜಾರಿಯೇ ಈ ದುರ್ಘಟನೆಗೆ ಕಾರಣ ಎನ್ನಲಾಗುತ್ತಿದೆ. ನಲ್ಲಿ ಸಂಪರ್ಕ ಕೊಡದೇ ಹಾಗೆ ಬಿಟ್ಟು ಹೋಗಿದ್ದರಿಂದ ಗ್ರಾಮದ ನಿವಾಸಿಗಳು ತಾವೇ ಅಲ್ಲಲ್ಲಿ ನಲ್ಲಿ ಸಂಪರ್ಕ ಪಡೆದುಕೊಂಡಿದ್ದಾರೆ.ಈ ಪೈಪಿನಲ್ಲಿ ಚರಂಡಿ ನೀರು ಸೇರಿ ನೀರು ಕಲುಷಿತಗೊಂಡು ಅದನ್ನೇ ಗ್ರಾಮದ ನಿವಾಸಿಗಳು ಗೊತ್ತಾಗದೆ ಸೇವಿಸಿದ್ದು ಈ ಘಟನೆಗೆ ಕಾರಣವಾಗಿದೆ.
ಪಿಡಿಓ ನಿರ್ಲಕ್ಷ್ಯ: ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದರೂ ಗ್ರಾ.ಪಂ ಪಿಡಿಓ ಹಾಗೂ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಘಟನೆಯ ಗಂಭೀರತೆ ಇನ್ನೂ ಅರ್ಥವಾಗಿಲ್ಲ.ಈ ಬಗ್ಗೆ ಗ್ರಾಮಸ್ಥರಿಗೆ ಅಗತ್ಯ ಜಾಗೃತಿ ಮೂಡಿಸುವ ಕಾರ್ಯವನ್ನು ಪಂಚಾಯತಿಯಿಂದ ಮಾಡಿಲ್ಲ ಎಂಬ ಆರೋಪಗಳು ಗ್ರಾಮಸ್ಥರಿಂದ ಕೇಳಿ ಬಂದಿವೆ.