Advertisement

ಕಲುಷಿತ ನೀರು ಸೇವನೆ: ಇಬ್ಬರು ಸಾವು

02:51 PM Oct 24, 2021 | Team Udayavani |

ಮುದ್ದೇಬಿಹಾಳ : ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಯರಗಲ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

Advertisement

ಕಳೆದ ಎರಡು ದಿನಗಳಿಂದ ಈ ಸಮಸ್ಯೆ ಉಲ್ಬಣವಾಗಿದ್ದು ಗ್ರಾಮದಲ್ಲಿನ ನೀರಿಗೆ ಚರಂಡಿ ನೀರು ಸೇರ್ಪಡೆ ಆಗಿ, ಇದೇ ಕಲುಷಿತ ನೀರು ಸೇವನೆ ಮಾಡಿರುವ ಗ್ರಾಮದ ನಿವಾಸಿಗಳು ತೀವ್ರ ಅನಾರೋಗ್ಯಕ್ಕಿಡಾಗಿ ಜೀವಣ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.

ಯರಗಲ್ ಗ್ರಾಮದ ಗುರುರಾಜ್ ಬಸವರಾಜ ಮಳಗಿ(15) ಶನಿವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರೆ, ಭಾನುವಾರ ನೀಲಮ್ಮ ನಾರಾಯಣಪ್ಪ ಬೆನಕಣ್ಣವರ(65) ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಇದೇ ನೀರು ಕುಡಿದು ಇನ್ನೂ ನಾಲ್ವರು ಅಸ್ವಸ್ಥತೆಯಿಂದ ಬಳಲುತ್ತಿದ್ದು, ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಊರಿಗೆ ಮರಳಿದ್ದಾರೆ.

ಕೊಳಚೆ ನೀರು, ಕುಡಿವ ನೀರು ಪೂರೈಸುವ ನಲ್ಲಿಗೆ  ಸಂಪರ್ಕ ಹೊಂದಿ ಕಲುಷಿತ ನೀರು ಪೂರೈಕೆಯಾಗಿ ಸಾವು ಸಂಭವಿಸಿದ್ದರೂ ತಾಲೂಕಾಡಳಿತ ಎಚ್ಚೆತ್ತುಕೊಂಡಿಲ್ಲ.

Advertisement

ಆಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಯರಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಈ ಘಟನೆಯ ಬಗ್ಗೆ ಮಾಹಿತಿಯೇ ಇಲ್ಲವೆಂದು ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.

ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ

ಯರಗಲ್ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಗರಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎಂ.ಎಸ್.ಪಾಟೀಲ ನೇತೃತ್ವದ ಆರೋಗ್ಯ ಇಲಾಖೆಯ ತಂಡದಿಂದ ಗ್ರಾಮಸ್ಥರ  ಆರೋಗ್ಯವನ್ನು ತಪಾಸಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಾತ್ರೆಗಳನ್ನು ವಿತರಿಸಲಾಗಿದೆ.

ಮನೆ ಮನೆಗೂ ನಲ್ಲಿ ನೀರು ಕೊಡುವ ಯೋಜನೆ  ಅಸಮರ್ಪಕ ಜಾರಿಯೇ ಈ ದುರ್ಘಟನೆಗೆ ಕಾರಣ ಎನ್ನಲಾಗುತ್ತಿದೆ. ನಲ್ಲಿ ಸಂಪರ್ಕ ಕೊಡದೇ ಹಾಗೆ ಬಿಟ್ಟು ಹೋಗಿದ್ದರಿಂದ ಗ್ರಾಮದ ನಿವಾಸಿಗಳು ತಾವೇ ಅಲ್ಲಲ್ಲಿ ನಲ್ಲಿ ಸಂಪರ್ಕ ಪಡೆದುಕೊಂಡಿದ್ದಾರೆ.ಈ ಪೈಪಿನಲ್ಲಿ ಚರಂಡಿ ನೀರು ಸೇರಿ ನೀರು ಕಲುಷಿತಗೊಂಡು ಅದನ್ನೇ ಗ್ರಾಮದ ನಿವಾಸಿಗಳು ಗೊತ್ತಾಗದೆ ಸೇವಿಸಿದ್ದು ಈ ಘಟನೆಗೆ ಕಾರಣವಾಗಿದೆ.

ಪಿಡಿಓ ನಿರ್ಲಕ್ಷ್ಯ: ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದರೂ ಗ್ರಾ.ಪಂ ಪಿಡಿಓ ಹಾಗೂ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಘಟನೆಯ ಗಂಭೀರತೆ ಇನ್ನೂ ಅರ್ಥವಾಗಿಲ್ಲ.ಈ ಬಗ್ಗೆ ಗ್ರಾಮಸ್ಥರಿಗೆ ಅಗತ್ಯ ಜಾಗೃತಿ ಮೂಡಿಸುವ ಕಾರ್ಯವನ್ನು ಪಂಚಾಯತಿಯಿಂದ ಮಾಡಿಲ್ಲ ಎಂಬ ಆರೋಪಗಳು ಗ್ರಾಮಸ್ಥರಿಂದ ಕೇಳಿ ಬಂದಿವೆ.

Advertisement

Udayavani is now on Telegram. Click here to join our channel and stay updated with the latest news.

Next