Advertisement

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್

05:11 PM Jan 28, 2021 | Adarsha |

ಶಿವಮೊಗ್ಗ: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗೆ ಟಿಸಿ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ, ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಎಂಜಿನಿಯರ್   ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

Advertisement

ಮೆಸ್ಕಾಂನ ಹೊಳೆಹೊನ್ನೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್. ಪ್ರಕಾಶ್, ಎಸಿಬಿ ಬಲೆಗೆ ಬಿದ್ದವರು. ಇಂದು ಮಧ್ಯಾಹ್ನ ಪ್ರಕಾಶ್ ಅವರು ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ಸಮಯದಲ್ಲಿ ಹೊಳೆಹೊನ್ನೂರು ಉಪ ವಿಭಾಗ ಕಚೇರಿಯಲ್ಲೇ ದಾಳಿ ನಡೆಸಲಾಗಿದ್ದು, ಎಂಜಿನಿಯರ್ ಬಿ.ಎಸ್.ಪ್ರಕಾಶ್ ಅವರ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ.

ಇದನ್ನೂ ಓದಿ:ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

ಎಸಿಬಿಯ ಪೂರ್ವ ವಲಯ ಎಸ್‍ಪಿ ಜಯಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್‍ಪಿ  ಲೋಕೇಶ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ, ಇನ್ಸ್ ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿಗಳಾದ ವಸಂತ ಎನ್.ಕೆ. ರಘುನಾಯ್ಕ, ನಾಗರಾಜ, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next