Advertisement

ಪೊಲೀಸ್ ಠಾಣೆ ಸಮೀಪವೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

04:58 PM Mar 20, 2021 | Team Udayavani |

ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ಪೊಲೀಸ್ ಠಾಣೆ ಸಮೀಪ ಕಾಂಗ್ರೆಸ್ ಮುಖಂಡ ಅಮ್ಜದ್ ರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿರುವ ಘಟನೆ ಸಂಭವಿಸಿದೆ.

Advertisement

ಶಿಡ್ಲಘಟ್ಟ ದಿಬ್ಬೂರಹಳ್ಳಿ ಮಾರ್ಗ ಮಧ್ಯೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡ ಅಮ್ಜದ್ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಮಚ್ಚುಗಳಿಂದ ಕೊಚ್ಚಿ ಮಾರುತಿ ಓಮನಿ ಕಾರ್‍ ನಲ್ಲಿ ಪರಾರಿಯಾಗಿದ್ದಾರೆ. ಜನನಿಬೀಡ ಪ್ರದೇಶದಲ್ಲಿ ಹಾಡುಹಗಲೆ ಸಿನಿಮಾ ಶೈಲಿಯಲ್ಲಿ ಕೊಲೆ ಮಾಡಿರುವ ದೃಶ್ಯವನ್ನು ಕಣ್ಣಾರೆ ಕಂಡ ನಾಗರೀಕರು ಭಯಭೀತರಾಗಿದ್ದಾರೆ.

ಶಿಡ್ಲಘಟ್ಟ ತಾಲೂಕಿನಲ್ಲಿ ರಾಜಕೀಯ ಹಾಗೂ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ಅಮ್ಜದ್ ಇತ್ತೀಚೆಗೆ ಕೋವಿಡ್ ಲಾಕ್‍ಡೌನ್ ಅವಧಿಯಲ್ಲಿ ಬಡವರಿಗೆ ಉಚಿತ ಆಹಾರ ಸಾಮಾಗ್ರಿಗಳನ್ನು ಪೂರೈಸಿ ಕೈಲಾದಷ್ಟು ಸಹಾಯ ಮಾಡುವ ಕಾಯಕವನ್ನು ರೂಢಿಸಿಕೊಂಡಿದ್ದರು. ಸಾರ್ವಜನಿಕ ಆಸ್ಪತ್ರೆ ಜಿಪಂ ತಾಂತ್ರಿಕ ಕಚೇರಿ ಹಾಗೂ ನಗರ ಪೊಲೀಸ್ ಠಾಣೆ ಆರಕ್ಷಕ ವೃತ್ತ ಕಚೇರಿಯ ಸಮೀಪ ಕೊಲೆಯಾಗಿದೆ.

ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಆರಕ್ಷಕ ಸಿಬ್ಬಂದಿ ದುಷ್ಕರ್ಮಿಗಳನ್ನು ಹಿಡಿಯಲು ಪ್ರಯತ್ನ ಮಾಡಿದರೂ ಸಫಲವಾಗಿಲ್ಲ.

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಚಿಂತಾಮಣಿ ಉಪ ವಿಭಾಗದ ಡಿವೈಎಸ್ ಪಿ ಲಕ್ಷ್ಮಯ್ಯ, ಸಿಪಿಐ ಆನಂದ್, ಸುರೇಶ್, ಶ್ರೀನಿವಾಸ್, ಪಿಎಸ್‍ಐ ಸತೀಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

Advertisement

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ ನಗರದ ರೈಲ್ವೆ ಕೆಳಸೇತುವೆ ಬಳಿ ದುಷ್ಕರ್ಮಿಗಳು ಅಮ್ಜದ್ ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿ ಅವರನ್ನು ಬಂಧಿಸಲಾಗುವುದು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next