ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಈಶಾನ್ಯ ರಾಜ್ಯಗಳಲ್ಲಿನ ಎಡಪಂಥೀಯ ಉಗ್ರವಾದ ಸೇರಿದಂತೆ ದೇಶದಲ್ಲಿ ಶೇ.80ರಷ್ಟು ಹಿಂಸಾಚಾರ ಕಡಿಮೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಇದನ್ನೂ ಓದಿ:ಹೆರಿಗೆಯಾದ ಕೆಲವೇ ಗಂಟೆಯಲ್ಲಿ 10ನೇ ತರಗತಿ ಪರೀಕ್ಷೆಗೆ ಹಾಜರಾದ 22ರ ಯುವತಿ.!
ಜಗತ್ತಿನಲ್ಲಿ ಭಾರತ ಅಗ್ರಮಾನ್ಯ ಸ್ಥಾನಮಾನ ಪಡೆಯಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವಾಗಿದೆ ಎಂದು ಶಾ ಈ ಸಂದರ್ಭದಲ್ಲಿ ಹೇಳಿದರು.
ಶಾ ಅವರು ಶನಿವಾರ (ಫೆ.17) ನಾಗ್ಪುರ್ ನಲ್ಲಿ ಲೋಕಮತ್ ಮೀಡಿಯಾ ಗ್ರೂಪ್ ಆಯೋಜಿಸಿದ್ದ ಪತ್ರಿಕೆಯ ಸಂಸ್ಥಾಪಕ-ಸಂಪಾದಕ ಮತ್ತು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಜವಾಹರಲಾಲ್ ದರ್ದಾ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದರ್ದಾ ಅವರು “ಬಾಬೂಜೀ” ಎಂದೇ ಜನಪ್ರಿಯರಾಗಿದ್ದರು. ನಾಗ್ಪುರ್ ದಿಂದ ಪ್ರಕಟವಾಗುತ್ತಿರುವ ಈ ಮರಾಠಿ ಪತ್ರಿಕೆ ಈಗ ಸುವರ್ಣ ಮಹೋತ್ಸವ ಆಚರಣೆ ಸಂಭ್ರಮದಲ್ಲಿದೆ.
ಕಳೆದ 70ವರ್ಷಗಳಲ್ಲಿ ಕಾಶ್ಮೀರಕ್ಕೆ 12,000 ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇವಲ ಮೂರು ವರ್ಷಗಳಲ್ಲಿ 12,000 ರೂಪಾಯಿ ಅಭಿವೃದ್ಧಿಗಾಗಿ ವಿನಿಯೋಗಿಸಲಾಗಿದೆ ಎಂದರು.