Advertisement

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ: ಕಠಿಣ ಕ್ರಮವೆಂದ ಉಡುಪಿ ಎಸ್ಪಿ

07:11 PM Aug 04, 2022 | Team Udayavani |

ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ  ಅಥವಾ ಹೇಳಿಕೆಗಳನ್ನು ಹಾಕಿದರೆ ಅಂತವರ ವಿರುದ್ದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೇಸ್ ಬುಕ್, ವಾಟ್ಸಾಪ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪ್ರಚೋದನಕಾರಿ ಹೇಳಿಕೆ (ಪೋಸ್ಟ್) ಗಳನ್ನು ಹಾಕುವವರ/ಫಾರ್ವರ್ಡ್ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಬಗ್ಗೆ ವಾಟ್ಸಪ್, ಗ್ರೂಪ್ ಅಡ್ಮಿನ್ ಗಳು ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸುವುದು ಹಾಗೂ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಬೇಕು. ಸಂಘಟನೆ, ವ್ಯಕ್ತಿಗಳು ಸೇರಿದಂತೆ ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿರುವ  ನಾನಾ ವ್ಯಕ್ತಿಗಳು, ಗುಂಪುಗಳ ಮೇಲೆ ಕಠಿಣ ನಿಗಾ ಇರಿಸಲಾಗಿದೆ. ಆನ್ಲೈನ್ ಮಾಧ್ಯಮ, ವೆಬ್ ಪೇಜ್, ಮುದ್ರಣ ಮಾಧ್ಯಮ ಮೇಲೂ ನಿಗಾ ವಹಿಸಲಾಗಿದೆ ಎಂದರು.

ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ಭಾವನೆ ಸೃಷ್ಟಿಸಿ, ಜಾತಿ ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಪೋಸ್ಟ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು, ಇಂತಹ ಪೋಸ್ಟ್‌ಗಳನ್ನು ಲೈಕ್, ಶೇರ್, ಫಾರ್ವಡ್ ಹಾಗೂ ಆಕ್ಷೇಪಾರ್ಹವಾಗಿ ಕಮೆಂಟ್ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: ಆ.11ರಂದು ಚೀನಾ ಹಡಗು ಶ್ರೀಲಂಕಾಕ್ಕೆ ಆಗಮನ: ಭಾರತದಿಂದ ತೀವ್ರ ಕಣ್ಗಾವಲು

Advertisement

ಯಾರೇ ಆದರೂ ವಿವಾದಾತ್ಮಕ ಪೋಸ್ಟರ್, ಪ್ರಚೋಧನಾಕಾರಿ ಹೇಳಿಕೆ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next