Advertisement

ಲಿಂಗಾಯತ ವೀರಶೈವ ಎಲ್ಲ ಉಪ ಪಂಗಡಗಳನ್ನು ಓಬಿಸಿಗೆ ಸೇರಿಸಲು ಒತ್ತಾಯ

04:41 PM May 15, 2022 | Team Udayavani |

ಬೆಂಗಳೂರು: ಲಿಂಗಾಯತ ವೀರಶೈವ ಸಮುದಾಯದ ಎಲ್ಲ ಉಪ ಪಂಗಡಗಳನ್ನೂ ಕೇಂದ್ರ ಸರ್ಕಾರದ ಓಬಿಸಿ ಪಟ್ಟಿಯಲ್ಲಿ ಸೇರಿಸಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯಿಸಿದೆ.

Advertisement

ಮಹಾ ಸಭಾದ ಕಾರ್ಯದರ್ಶಿ ಈಶ್ವರ್ ಖಂಡ್ರೆ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿ, ”ಸರ್ವರಿಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಜಗತ್ತಿಗೆ ಕಟ್ಟಿಕೊಟ್ಟ ಸಮಾಜ ಇದಾಗಿದೆ. ಆದರೆ ಬಸವತತ್ವ ಅನುಯಾಯಿಗಳಾದ ಲಿಂಗಾಯತ ವೀರಶೈವರೇ ಇಂದು ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವುದು ನಿಜಕ್ಕೂ ದೌರ್ಭಾಗ್ಯ”ಎಂದರು.

ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವೀರಶೈವ ಮತ್ತು ಲಿಂಗಾಯಿತ ಸಮುದಾಯದ ಜನರಿದ್ದು, ಕರ್ನಾಟಕದಲ್ಲಿ ಸುಮಾರು ಶೇ.18ರಿಂದ 20ರಷ್ಟು ಲಿಂಗಾಯತ- ವೀರಶೈವರಿದ್ದಾರೆ ಎಂದು ಜನಗಣತಿಯಲ್ಲಿ ಉಲ್ಲೇಖಿಸಲಾಗಿದೆ. ವೀರಶೈವ ಮತ್ತು ಲಿಂಗಾಯತರು ಮುಂದುವರಿದವರು ಎಂದು ಕೆಲವರು ವಾದಿಸುತ್ತಾರೆ. ಆದರೆ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿಯೂ ಅತ್ಯಂತ ಹಿಂದುಳಿದಿರುವ ಸಮುದಾಯದಲ್ಲಿ ಲಿಂಗಾಯತ ವೀರಶೈವ ಸಮುದಾಯ ಸೇರುತ್ತದೆ ಎಂದರು.

ಇಂದು ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ ಇರಲಿ, ಬ್ಯಾಂಕಿಂಗ್ ನೇಮಕಾತಿ ಮಂಡಳಿಯೇ ಇರಲಿ, ರೈಲ್ವೆ ನೇಮಕಾತಿ ಮಂಡಳಿಯ ನೇಮಕಾತಿ ಆಗಿರಲಿ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಸ್.ಎಸ್.ಸಿ. ನೇಮಕಾತಿ ಆಗಿರಲಿ ಅಥವಾ ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳ ನೇಮಕಾತಿಯೇ ಆಗಿರಲಿ ಇವುಗಳಲ್ಲಿ ಲಿಂಗಾಯತ ಮತ್ತು ವೀರಶೈವ ಸಮುದಾಯದಿಂದ ಆಯ್ಕೆಯಾಗಿ ನೇಮಕಗೊಂಡಿರುವ ಪಾಲು ನಗಣ್ಯ. ಇದಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಈ ಸಮುದಾಯ ಹಿಂದುಳಿದಿರುವುದೇ ಕಾರಣವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next