Advertisement
ನಗರದ ಜಿಪಂ ವಿಡಿಯೋ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾಮಟ್ಟದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವ ಸಮೂಹವನ್ನು ಮತದಾರರ ಪಟ್ಟಿಗೆ ಸೇರಿಸುವ ನೋಂದಣಿಗಾಗಿ ಅಭಿಯಾನ ಹಾಗೂ ಮಿಂಚಿನ ನೋಂದಣಿ ಕಾರ್ಯ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಅರ್ಹ ಯುವಕ, ಯುವತಿಯರು ತಪ್ಪದೇ ನೋಂದಣಿ ಮಾಡಿಕೊಳ್ಳಬೇಕೆಂದು ಹೇಳಿದರು.
Related Articles
Advertisement
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಅಡವಿಮಠ ಮಾತನಾಡಿ, 2023ರ ಜ.1ಕ್ಕೆ 18 ವರ್ಷ ಪೂರ್ಣಗೊಳ್ಳುವವರು, ಮತದಾರರ ಯಾದಿಗಳಲ್ಲಿ ಹೆಸರು ಇಲ್ಲದವರು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ನಮೂನೆ ನಂ.6 ರಲ್ಲಿ ಸಲ್ಲಿಸಬಹುದು. ಈ ಕುರಿತು ಇಲಾಖಾ ಅಧಿಕಾರಿಗಳು ಅರ್ಹರೆಲ್ಲರನ್ನು ನೋಂದಣಿ ಮಾಡಿಸಬೇಕೆಂದರು.
ಜಿಲ್ಲಾಡಳಿತದಿಂದ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಅರ್ಹ ನಾಗರಿಕರು ಹಾಗೂ 18 ವರ್ಷ ವಯೋಮಾನದ ಯುವ ಮತದಾರರು ತಮ್ಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನಮೂನೆ 6 ರಲ್ಲಿ ಸಂಬಂಧಿಸಿದ ಬಿಎಲ್‌ಒಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವನ್ನು ಜಿಲ್ಲೆಯ ಅರ್ಹ ಯುವಕರು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಬಹುದು ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ ಜೆ.ಸಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಐ.ಆರ್. ಅಕ್ಕಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮುಖ್ಯ ಚುನಾವಣಾ ತರಬೇತುದಾರ ಬಸವರಾಜ ಗಿರಿತಿಮ್ಮಣ್ಣವರ, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು, ಚುನಾವಣಾ ಶಾಖೆ ತಹಶೀಲ್ದಾರ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠಲ ಜಾಬಗೌಡ್ರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೌಶಲ್ಯಾಭಿವೃದ್ಧಿ ಅಧಿಕಾರಿ ಮಲ್ಲೂರ ಬಸವರಾಜ ಸೇರಿದಂತೆ ಸ್ವೀಪ್ ಸಮಿತಿ ಸದಸ್ಯರು ಭಾಗವಹಿಸಿದ್ದರು.