Advertisement

ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾಗೆ ಸೇರಿದ 2 ಸಾವಿರ ಕೋಟಿ ಮೌಲ್ಯದ ಆಸ್ತಿ ಜಪ್ತಿ!

05:44 PM Oct 07, 2020 | Nagendra Trasi |

ನವದೆಹಲಿ: ಬೇನಾಮಿ ತಡೆ ಕಾಯ್ದೆಯಡಿ ಆದಾಯ ತೆರಿಗೆ ಇಲಾಖೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತ ಸಹಾಯಕಿ ವಿಕೆ ಶಶಿಕಲಾ ಅವರಿಗೆ ಸೇರಿದ್ದ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಬುಧವಾರ (ಅಕ್ಟೋಬರ್ 07, 2020) ಜಪ್ತಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಇದರಲ್ಲಿ ವಿಕೆ ಶಶಿಕಲಾಗೆ ಸೇರಿದ್ದ 300 ಕೋಟಿ ರೂಪಾಯಿ ಮೌಲ್ಯದ ಎರಡು ಆಸ್ತಿ ಸೇರಿದೆ. ನಾಲ್ಕು ವರ್ಷಗಳ ಜೈಲು ಶಿಕ್ಷೆ ಮುಗಿಸಿ ಬಿಡುಗಡೆಯಾದ ನಂತರ ವಾಸವಾಗಿರಬೇಕೆಂದುಕೊಂಡಿದ್ದ ಬಂಗಲೆಯನ್ನು ಕೂಡಾ ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿಕೊಂಡಿದೆ.

ದಿ.ಜಯಾ ಆಪ್ತೆ ಶಶಿಕಲಾ, ಇಳವರಸಿ ಹಾಗೂ ಸುಧಾಕರನ್ ಹೆಸರಿನಲ್ಲಿ ಸಿರುಥವೂರ್ ಮತ್ತು ಕೋಡನಾಡು ಪ್ರದೇಶದಲ್ಲಿ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಹಚ್ಚಿತ್ತು. ಅಲ್ಲದೇ ಆದಾಯ ತೆರಿಗೆ ಇಲಾಖೆಯ ಬೇನಾಮಿ ತಡೆ ಘಟಕ ನೋಟಿಸ್ ಅನ್ನು ಕೂಡಾ ಆಸ್ತಿ ಜಾಗದಲ್ಲಿ ಹಚ್ಚಿರುವುದಾಗಿ ವರದಿ ತಿಳಿಸಿದೆ.

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರಿಗೆ ಸೇರಿದ್ದ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಐಟಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣಕ್ಕೆ ಹೊಸ ತಿರುವು: ಎರಡೂ ಕುಟುಂಬಗಳ ನಡುವೆ 104 ಬಾರಿ ಫೋನ್‌ ಸಂಭಾಷಣೆ

Advertisement

2017ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮಿಳುನಾಡು, ಪುದುಚೇರಿಯಲ್ಲಿ ಶಶಿಕಲಾ ಹಾಗೂ ಅವರ ಪತಿ ನಟರಾಜನ್, ಸಂಬಂಧಿಗಳಿಗೆ ಸೇರಿದ್ದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ 1,500 ಕೋಟಿ ರೂಪಾಯಿ ಆದಾಯ ತೆರಿಗೆ ವಂಚನೆ ಪತ್ತೆಯಾಗಿತ್ತು. ಅಲ್ಲದೇ 7 ಕೋಟಿ ರೂಪಾಯಿ ನಗದು, 5 ಕೋಟಿ ಮೌಲ್ಯದ ಆಭರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next