Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು ಕಾನೂನು ಅವರ ಕೈಯಲ್ಲಿದೆ, ಏನು ಬೇಕಾದರೂ ಮಾಡಬಹುದು. ಉಪಚುನಾವಣೆಯಲ್ಲಿ ಕಾಗವಾಡ ಚುನಾವಣಾ ಪ್ರಚಾರಕ್ಕೆ ಅನುಮತಿ ಕೊಟ್ಟಿಲ್ಲ. ಅ ಧಿಕಾರ ಅವರದ್ದಿದೆ, ಹೇಗೆ ಬೇಕು ಹಾಗೆ ಮಾಡಲಿ. ದುಡ್ಡಿನ ಮೇಲೆಯೇ ರಾಜಕಾರಣ ಮಾಡಲು ಸಾಧ್ಯವಿಲ್ಲ, ಮತದಾರರು ಬಿಜೆಪಿ ಬಳಿ ಹಣ ಪಡೆದುಕೊಂಡು ಅನರ್ಹರ ವಿರುದ್ಧ ಮತ ಹಾಕುತ್ತಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರದಲ್ಲಿ ಎಲ್ಲರೂ ಅವರದೇ ರೀತಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕುರಿತು ಎಐಸಿಸಿಯಿಂದ ಕೆಲ ಸೂಚನೆಗಳು ಬಂದಿದ್ದು, ನೋಡೋಣ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ಹೊರಟ್ಟಿದ್ದ ಕುಮಾರಸ್ವಾಮಿ ಅವರು ಕೆಲಹೊತ್ತು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿ ಪಡೆದು ನಂತರ ಪ್ರಯಾಣ ಬೆಳೆಸಿದರು. ಇದೇ ಸಮಯದಲ್ಲಿ ಡಿ.ಕೆ.ಶಿವಕುಮಾರ ಬೆಂಗಳೂರಿಗೆ ತೆರಳಬೇಕಿತ್ತು. ಅವರು ಕೂಡ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ ಶಿವಕುಮಾರ ಪರಸ್ಪರ ಭೇಟಿಯಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಉಪಚುನಾವಣೆ ಕುರಿತು ಚರ್ಚಿಸಿದರು. ಇಬ್ಬರೂ ನಾಯಕರು ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ನಂತರ ಪ್ರತ್ಯೇಕ ಹೆಲಿಕಾಪ್ಟರ್‌ಗಳ ಮೂಲಕ ಪ್ರಯಾಣ ಬೆಳೆಸಿದರು.