Advertisement

ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಮನೆ ಮೇಲೆ ಇಡಿ ದಾಳಿ

05:37 PM Jan 19, 2023 | Team Udayavani |

ಕಲಬುರಗಿ:  ಪಿಎಸ್ ಐ ಪರೀಕ್ಷಾ ಹಗಣದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಹೈಕೋರ್ಟ್ ಪಕ್ಕದಲ್ಲಿರುವ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಬುದುವಾರ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಬೆಳಗ್ಗೆಯೇ ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಈ ವೇಳೆ ರುದ್ರಗೌಡ ಮನೆಯಲ್ಲಿದ್ದು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆಂದು ಮೂಲಗಳು ಹೇಳಿವೆ. ಅವರ ಪತ್ನಿ ಹಾಗೂ ತಾಯಿ ಸೇರಿದಂತೆ ಇತರೆ ವ್ಯಕ್ತಿಗಳು ಮನೆಯಲ್ಲಿದ್ದು ಆದಾಯ ಇಲಾಖೆ ತೆರಿಗೆ ಅಧಿಕಾರಿಗಳಿಗೆ ಸಹಕಾರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಪಡೆದ ಹಣದ ದಾಖಲೆಗಳು, ಇತರೆ ಮಾಹಿತಿಗಳನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಹೈದರಾಬಾದ್ ಸೇರಿದಂತೆ ತೆಲಂಗಾಣ ನಂಬರ್ ಪ್ಲೇಟ್ ಉಳ್ಳ ವಾಹನಗಳಲ್ಲಿ ಅಧಿಕಾರಿಗಳು ಬಂದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Advertisement

ಇದನ್ನೂ ಓದಿ: 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಸಿಂಗಾಪುರಕ್ಕೆ ಹಾರಿದ ಸ್ಕೂಟ್ ಏರ್ ಲೈನ್ಸ್

Advertisement

Udayavani is now on Telegram. Click here to join our channel and stay updated with the latest news.

Next