Advertisement

ಕಾಯಕ ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಿ: ಸಂತೋಷ

05:34 PM Jan 01, 2022 | Team Udayavani |

ನಾರಾಯಣಪುರ: ಆರ್ಥಿಕ ಸ್ಥಿತಿ ಸುಧಾರಣೆಯಾಗಲು ಪ್ರತಿಯೊಬ್ಬರು ತಮ್ಮ ದೈನಂದಿನ ಕಾಯಕ ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ಧಿ ಯೋಜನೆಯ ಸುರುಪುರ ತಾಲೂಕು ಯೋಜನಾಧಿಕಾರಿ ಸಂತೋಷ ಹೇಳಿದರು.

Advertisement

ಕೊಡೇಕಲ್‌ ಪಟ್ಟಣ ಶ್ರೀ ನಿಜಲಿಂಗಪ್ಪ ದೇವಸ್ಥಾನದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಉಚಿತ ಹೊಲಗೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶ್ರೀಕ್ಷೇತ್ರ ಧರ್ಮಸ್ಥಳದ ಪೂಜ್ಯರಾದ ಡಾ| ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೋಶ್ರೀ ಹೇಮಾವತಿ ಹೆಗ್ಗಡೆಯವರ ಆಶಯದಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಂಡು ಸ್ವಯಂ ಉದ್ಯೋಗದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ದುಡಿಮೆ ಹಣವನ್ನು ಮಿತವಾಗಿ ಬಳಸಿಕೊಂಡು ಉಳಿತಾಯಕ್ಕೆ ಆದ್ಯತೆ ನೀಡಿ ಎಂದು ತಿಳಿಸಿದರು.

ಗ್ರಾಪಂ ಉಪಾಧ್ಯಕ್ಷ ಮಲ್ಲಪ್ಪ ಕೊಡೇಕಲ್‌ ಕಾರ್ಯಕ್ರಮ ಉದ್ಘಾಟಿಸಿದರು. ಮುಖಂಡ ಶರಣು, ವಲಯದ ಮೇಲ್ವಿಚಾರಕ ಮಂಜುನಾಥ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ, ತರಬೇತಿ ಶಿಕ್ಷಕರಾದ ಸಂಗೀತಾ, ಸೇವಾ ಪ್ರತಿನಿಧಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next