Advertisement
ಅವುಗಳು ಫಲಪ್ರದವಾಗುವ ಉದ್ದೇಶದಿಂದ ಕೃಷಿ ಇಲಾಖೆಯ ಹಾಗೂ ವಿವಿಧ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಗೌರಿಬಿದನೂರು ತಾಲೂಕಿನ ಆಯ್ದ ಗ್ರಾಮ ಪಂಚಾಯತಿ ಮತ್ತು ಗ್ರಾಮಗಳಿಗೆ ಭೇಟಿ ನೀಡಿ ಸಭೆ ನಡೆಸಿ ರೈತರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ತಾಲೂಕಿನ ಗಂಗಸಂದ್ರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಪಂ ಕಚೇರಿಯಲ್ಲಿ ಸೇರಿದ್ದ ಸ್ಥಳೀಯ ಜನಪ್ರತಿನಿಧಿಗಳು, ಮಹಿಳಾ ಸ್ವಸಹಾಯ ಸಂಘಗಳು, ರೈತರು ಹಾಗೂ ರೈತ ಮಹಿಳೆಯರೊಂದಿಗೆ ಚರ್ಚಿಸಿದ್ದಾರೆ.
Related Articles
Advertisement
ರೈತರಿಂದ ಮಾಹಿತಿ ಪಡೆದ ಡೀಸಿ: ವಿವಿಧ ಯೋಜನೆಯಡಿ ಬೆಳೆದಿದ್ದ ತೋಟಗಾರಿಕಾ ಬೆಳೆಗಳನ್ನು ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿ ಬೆಳೆದಿದ್ದ ತೊಗರಿ ತಾಕುಗಳನ್ನು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ವೀಕ್ಷಿಸಿ ರೈತರಿಂದ ಮಾಹಿತಿ ಪಡೆದರು. ಹಿರೇಬಿದನೂರು ಹೊರ ವಲಯದಲ್ಲಿ ಗೋವಿಂದರಾಜು ಅವರು ಕೃಷಿ ಇಲಾಖೆಯ ರೈತ ಸಿರಿ ಯೋಜನೆಯಲ್ಲಿ ಸಂಸ್ಕರಣೆ ಹಾಗೂ ಮೌಲ್ಯವರ್ಧನೆಗಾಗಿ ಸ್ಥಾಪಿಸಿರುವ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಘಟಕದ ಕುರಿತು ಸಮಗ್ರ ವಿವರಗಳನ್ನು ಅವರಿಂದ ಪಡೆದರು.
ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ರೂಪಾ, ತಹಶೀಲ್ದಾರ್ ಶ್ರೀನಿವಾಸ್, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್, ಗ್ರಾಪಂ ಅಧ್ಯಕ್ಷ ಲಕ್ಷ್ಮೀನಾರಾಯಣ, ಸದಸ್ಯರು, ಅಧಿಕಾರಿಗಳಾದ ಚಿದಾನಂದ, ತಿಮ್ಮರಾಯಸ್ವಾಮಿ, ಕಂದಾಯ ಇಲಾಖೆಯ ಅಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ರೈತರು ಮತ್ತು ರೈತ ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು.
ಸಿರಿಧಾನ್ಯ ಆಹಾರ ಪದ್ಧತಿಯಲ್ಲಿ ಅಳವಡಿಕೆ: ಮುಂದಿನ ದಿನಗಳಲ್ಲಿ ಗೌರಿಬಿದನೂರು ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಸಿರಿಧಾನ್ಯ ಉತ್ಪಾದನೆ ಸಂಸ್ಕರಣೆ ಮೌಲ್ಯವರ್ಧನೆ ಹಾಗೂ ಆಹಾರದಲ್ಲಿ ಅವುಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿರುವ ಜಿಲ್ಲಾಧಿಕಾರಿಗಳು, ಸದರಿ ಸಂಸ್ಕರಿಸಿದಂತಹ ಸಿರಿಧಾನ್ಯಗಳನ್ನು ತಾಲೂಕಿನ ಹಾಗೂ ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಮೂಲಕ ಉತ್ತಮ ಆರೋಗ್ಯದ ದೃಷ್ಟಿಯಿಂದ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
* ಗಣೇಶ್ ವಿ.ಡಿ