ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಡೇಟಾ ಎಂಟ್ರಿ ಆಪರೇಟರ್‌ಗಳ ಪಾತ್ರ ಪ್ರಮುಖವಾಗಿದೆ. ತಾವು ತರಬೇತಿ ಪಡೆದು ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಜಿಪಂ ಸಿಇಒ ಪಿ.ಶಿವಶಂಕರ್ ತಿಳಿಸಿದರು.
ನಗರದ ಜಿಪಂ ತರಬೇತಿ ಕೇಂದ್ರದಲ್ಲಿ ಡೇಟಾ ಎಂಟ್ರಿ ಆಪರೇಟರ್, ಬಿಎಫ್‌ಟಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮನುಷ್ಯನಿಗೆ ಸೇವೆ, ಚಿಕಿತ್ಸೆ ಹೇಗಿರುತ್ತದೆ. ಹಾಗೆಯೇ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಡೇಟಾ ಎಂಟ್ರಿ ಆಪರೇಟರ್ ತರಬೇತಿಯಲ್ಲಿ ಮತ್ತಷ್ಟು ಪರಿಣಿತಿ ಸಾಧಿ ಸಬೇಕೆಂದು ಕಿವಿಮಾತು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಮೂಲಕ ಅನೇಕ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಅದರಲ್ಲಿ ಉದ್ಯೋಗ ಖಾತ್ರಿ, ಸ್ವತ್ಛ ಭಾರತ್ ಮಿಷನ್, ವಸತಿ ಸೌಲಭ್ಯ, ಸಕಾಲ, ಇನ್ನಿತರೆ ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆಗಳನ್ನು ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸಲು ಡೇಟಾ ಎಂಟ್ರಿ ಆಪರೇಟರ್ಗೆ ತರಬೇತಿ ಅಗತ್ಯ ಎಂದು ತಿಳಿಸಿದರು.
ಸೂಕ್ತ ಮಾರ್ಗದರ್ಶನ ನೀಡಿ: ಗ್ರಾಪಂನಲ್ಲಿ ಕಾರ್ಯನಿರ್ವಹಿಸುವ ಡೇಟಾ ಎಂಟ್ರಿ ಆಪರೇಟರ್ ಚುನಾಯಿತ ಪ್ರತಿನಿಧಿ ಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಜೊತೆಗೆ ಸರ್ಕಾರಿ ಕೆಲಸಗಳ ನಿಮಿತ್ತ ಬರುವ ಗ್ರಾಮಸ್ಥರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರಿಗೆ ಸರ್ಕಾರದ ಸೌಲಭ್ಯಗಳ ಕುರಿತು ಅಗತ್ಯ ಮಾಹಿತಿ ನೀಡುವ ಜೊತೆಗೆ ಸೂಕ್ತ ಮಾರ್ಗದರ್ಶನ ನೀಡಿ ಸಹಕರಿಸಬೇಕೆಂದು ಸೂಚಿಸಿದರು.
ಈ ವೇಳೆ ಉದ್ಯೋಗ ಖಾತ್ರಿ ಯೋಜನೆ, ಸ್ವತ್ಛ ಭಾರತ್ ಮಿಷನ್, ಪಂಚತಂತ್ರ, ಇ -ಆಡಳಿತ, ಸಕಾಲ, ಮೊಬೈಲ್ ಮೂಲಕ ಅರ್ಜಿ ಸ್ವೀಕರಿಸಿ ಅಪ್ಲೋಡ್ ಮಾಡುವುದು, ಸರ್ಕಾರದ ವಿವಿಧ ಸಂಸ್ಥೆಗಳಿಗೆ ವರದಿ ಸಲ್ಲಿಸುವ ವಿಚಾರಕ್ಕೆ ಸಂಬಂಧಿ ಸಿದಂತೆ, ಕಾನೂನಿನ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಯಿತು. ಜಿಲ್ಲೆಯ ಬಾಗೇಪಲ್ಲಿ, ಚಿಕ್ಕಬಳ್ಳಾಪುರ ತಾಲೂಕಿನ ಡೇಟಾ ಎಂಟ್ರಿ ಆಪರೇಟರ್, ಬಿಎಫ್‌ಟಿಗೆ ತರಬೇತಿ ನೀಡಲಾಯಿತು. ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.