Advertisement

ಕೋವಿಡ್ 19 ಪರೀಕ್ಷೆ ಪ್ರಮಾಣ ಹೆಚ್ಚಿಸಿ: ಸಿದ್ದರಾಮಯ್ಯ

01:20 AM Apr 18, 2020 | Sriram |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ತಪಾಸಣೆ ಪ್ರಮಾಣವನ್ನು ಹೆಚ್ಚಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.

Advertisement

ಕೋವಿಡ್ 19 ಹಿನ್ನೆಲೆಯಲ್ಲಿ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಸೋಂಕಿತರ ಪರೀಕ್ಷೆ ಕಾರ್ಯ ಮಂದಗತಿಯಲ್ಲಿ ಸಾಗಿದೆ. ಹೀಗಾಗಿ ಪರೀಕ್ಷೆ ಪ್ರಮಾಣ ಹೆಚ್ಚಿಸುವಂತೆ ಸರಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಸೋಂಕು ಕಂಡುಬಂದಾಗಲೇ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕಿತ್ತು. ವಿಧಾನ ಮಂಡಲ ಅಧಿವೇಶನ ಮುಂದೂಡಿ ಗಮನಹರಿಸಿ ಎಂದಿದ್ದೆವು ವಿಳಂಬ ಮಾಡಿದ್ದರಿಂದಲೇ ಈ ಹಂತ ತಲುಪಿದೆ ಎಂದರು. ಜತೆಗೆ ಸೋಂಕಿತರ ಪತ್ತೆಗೆ ಕೇರಳ ಮಾದರಿ ಅನುಸರಿಬೇಕು. ಹಣ್ಣು, ತರಕಾರಿ ಬೆಳೆಯುತ್ತಿರುವ ರೈತರಿಗೆ ದೊಡ್ಡ ಅನ್ಯಾಯವಾಗುತ್ತಿದೆ. ಸರಕಾರವೇ ಖರೀದಿ ಮಾಡಲಿ ಎಂದು ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ. ಕೋವಿಡ್ 19 ಪರೀಕ್ಷೆ ನಡೆಸುವ ಕಿಟ್‌ಗಳೂ ಸರಬರಾಜು ಆಗುತ್ತಿಲ್ಲ. ಆ ಬಗ್ಗೆ ಸರಕಾರ ತುರ್ತಾಗಿ ಗಮನ ಹರಿಸಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next